ವಿವಿಧ ಸಂಘಟನೆಗಳ ಪ್ರತಿಭಟನೆ

7

ವಿವಿಧ ಸಂಘಟನೆಗಳ ಪ್ರತಿಭಟನೆ

Published:
Updated:

ಬೆಂಗಳೂರು: ಪೆಟ್ರೋಲ್ ದರ ಹೆಚ್ಚಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ವಿವಿಧ ಜನಪರ ಸಂಘಟನೆಗಳ ಸದಸ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.ನಗರದ ಪುರಭವನದ ಮುಂದೆ ಪ್ರತಿಭಟನೆ ಮಾಡಿದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಕಾರ್ಯಕರ್ತರು `ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾಗದಿದ್ದರೂ ತೈಲೋತ್ಪನ್ನ ಕಂಪೆನಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಪೆಟ್ರೋಲ್ ದರವನ್ನು ಹೆಚ್ಚಿಸಿದೆ. ಇದರಿಂದ ಜನ ಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ~ ಎಂದು ದೂರಿದರು.`ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ 40 ರೂ ಇದ್ದ ಪೆಟ್ರೋಲ್ ದರ ಈಗ ಎರಡರಷ್ಟಾಗಿದೆ. ತೈಲ ಕಂಪೆನಿಗಳ ಹಿತ ಕ್ಕಾಗಿ ಕೇಂದ್ರ ಜನ ವಿರೋಧಿ ನೀತಿ ಅನುಸರಿಸುತ್ತಿರುವುದು ಖಂಡನೀಯ~ ಎಂದು ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿಗಣಿ ಶಂಕರ್ ಆರೋಪಿಸಿದರು.`ಜನ ಸಾಮಾನ್ಯರಿಗೆ ಹೊರೆಯಾಗಿರುವ ಪೆಟ್ರೋಲ್ ದರ ಏರಿಕೆ ನೀತಿಯನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು~ ಎಂದು ಆಗ್ರಹಿಸಿ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ನಗರದ ಆನಂದ್‌ರಾವ್ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೈಕ್‌ಗಳನ್ನು ತಳ್ಳುವ ಮೂಲಕ ಪ್ರತಿಭಟನೆ ಮಾಡಿದರು.`ಈಗಾಗಲೇ ಆಹಾರ ಪದಾರ್ಥಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಕೇಂದ್ರ ಪೆಟ್ರೋಲ್ ದರ ಹೆಚ್ಚಿಸಿ ಜನ ಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದೆ~ ಎಂದು ನಗರ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಗಣೇಶ್ ಆಕ್ರೋಶ

ವ್ಯಕ್ತಪಡಿಸಿದರು.`ರಾಜ್ಯ ಸರ್ಕಾರ ಕೂಡಲೇ ಪೆಟ್ರೋಲ್ ಮೇಲೆ ವಿಧಿಸಿರುವ ಎಲ್ಲಾ ರೀತಿಯ ತೆರಿಗೆಯನ್ನು ಹಿಂಪಡೆಯಬೇಕು~ ಎಂದು ಒತ್ತಾಯಿಸಿ ಎಐಎಡಿಎಂಕೆ ಕಾರ್ಯಕರ್ತರು ಎಂ.ಜಿ.ರಸ್ತೆಯ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಿದರು. ಕಳೆದ ಮೂರು ವರ್ಷದಲ್ಲಿ 18 ಬಾರಿ ಪೆಟ್ರೋಲ್ ದರ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ದಾಖಲೆ ನಿರ್ಮಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry