ವಿವೇಕಾನಂದರ 150ನೇ ಜನ್ಮದಿನಾಚರಣೆ

7

ವಿವೇಕಾನಂದರ 150ನೇ ಜನ್ಮದಿನಾಚರಣೆ

Published:
Updated:

ಕನಕಪುರ: ವಿವೇಕಾನಂದರ ತತ್ವ ಆದರ್ಶಗಳನ್ನು ಪ್ರತಿಯೊಬ್ಬ ಭಾರತೀ ಯನು ಮೈಗೂಡಿಸಿ ಕೊಳ್ಳಬೇಕೆಂದು ಸ್ವಾಮಿ ವಿವೇಕಾನಂದ ಸಮಿತಿಯ ಜಿಲ್ಲಾ ಪ್ರತಿನಿಧಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಮಲ್ಲಪ್ಪ ತಿಳಿಸಿದರು.ತಾಲ್ಲೂಕಿನ ಹಾರೋಹಳ್ಳಿ ಪ್ರಗತಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಭಾರತದೌಡ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ವಿಶ್ವಮಟ್ಟದಲ್ಲಿ ಭಾರತದ ಧಾರ್ಮಿ ಕತೆಯನ್ನು ಸಾರಿದ ಸ್ವಾಮಿ ವಿವೇಕಾ ನಂದರ ಸಂದೇಶವನ್ನು ಪ್ರತಿಯೊಂದು ಮನೆಗೂ ತಲುಪಿಸುವಂತ ಕೆಲಸವನ್ನು  ಸಂಘಟನೆ ಮಾಡುವುದು ಎಂದರು.ನ್ಯಾಷನಲ್‌ ಕಾಲೇಜಿನ ಉಪನ್ಯಾಸಕ ಶ್ರೀನಿವಾಸ್‌ ಮತ್ತು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಮುಖ್ಯ ಶಿಕ್ಷಕ ಟಿ.ಎಚ್‌.ಹೊಸಮನಿ ಮಾತನಾಡಿದರು.  ಪ್ರಗತಿ ಶಾಲೆಯ ಪ್ರಾಂಶುಪಾಲ  ಶಿವನಂಜಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟರಾಜು, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನೀಲಮ್ಮ, ಮುಖಂಡರಾದ ಎಚ್‌.ಕೆ. ಸುರೇಶ್‌, ಮುರಳೀಧರ್‌ ಇತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry