ಶುಕ್ರವಾರ, ಫೆಬ್ರವರಿ 26, 2021
18 °C

ವಿಶೇಷ ಕಾರ್ಯಾಚರಣೆ: ಸರ್ಕಾರಿ ಬಸ್‌ ಸೇರಿ 66 ವಾಹನ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಶೇಷ ಕಾರ್ಯಾಚರಣೆ: ಸರ್ಕಾರಿ ಬಸ್‌ ಸೇರಿ 66 ವಾಹನ ಜಪ್ತಿ

ಬೆಂಗಳೂರು: ಬೆಂಗಳೂರು ಉತ್ತರ ವಿಭಾಗದ ಯಲಹಂಕ, ದೇವನಹಳ್ಳಿ ಹಾಗೂ ಹೆಬ್ಬಾಳ ಮೇಲ್ಸೇತುವೆ ಬಳಿ ಬುಧವಾರ ವಿಶೇಷ ಕಾರ್ಯಾಚರಣೆ ನಡೆಸಿದ ಸಾರಿಗೆ ಇಲಾಖೆಯ ಅಧಿಕಾರಿಗಳು, ನಿಯಮ ಉಲ್ಲಂಘಿಸಿದ 66 ವಾಹನಗಳನ್ನು ಜಪ್ತಿ ಮಾಡಿದರು.ಜಂಟಿ ಆಯುಕ್ತ  ಜೆ. ಜ್ಞಾನೇಂದ್ರ ಕುಮಾರ್‌ ನೇತೃತ್ವದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ ತನಕ  ನಡೆದ ಕಾರ್ಯಾಚರಣೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ 300ಕ್ಕೂ ಅಧಿಕ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಯಿತು.‘ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯದ ನಿಗದಿತ ಪರವಾನಗಿ ಮಿತಿಯನ್ನು ಉಲ್ಲಂಘಿಸಿದ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬುಲೆಟ್‌ ಬೈಕುಗಳು ಸೇರಿದಂತೆ 100ಕ್ಕೂ ಅಧಿಕ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸರ್ಕಾರಿ ಬಸ್‌ಗಳು ಸೇರಿದಂತೆ 66 ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಜ್ಞಾನೇಂದ್ರ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.ಯಾವುದೇ ವಾಹನದಿಂದ ಹೊರಡುವ ಶಬ್ದ 80 ಡೆಸಿಬಲ್‌ಗಳಷ್ಟು ಇರಬೇಕು. ಅದನ್ನು ಮೀರಿದರೆ, ಅದು ಶಿಕ್ಷಾರ್ಹ ಎಂದು ಮೋಟಾರು ವಾಹನಗಳ ಕಾಯ್ದೆಯ ಸೆಕ್ಷನ್ 53(1)(ಬಿ) ಹೇಳುತ್ತದೆ ಎಂದು ಅವರು ನುಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.