ಶುಕ್ರವಾರ, ಮೇ 7, 2021
27 °C

ವಿಶೇಷ ಕೋಟಾ: ದಾಖಲೆ ಪರಿಶೀಲನೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಶೇಷ ಕೋಟಾದಡಿ ವೈದ್ಯಕೀಯ/ದಂತ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ಕೋರ್ಸ್‌ಗಳಿಗೆ ಪ್ರವೇಶ ಬಯಸಿರುವ ಎನ್‌ಸಿಸಿ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮತ್ತು ಅಂಗವಿಕಲ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಸೋಮವಾರ ನಡೆಯಿತು.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಎನ್‌ಸಿಸಿ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗೆ ಒಟ್ಟು 413 ಮಂದಿ ಹಾಜರಾಗಿದ್ದರು. ಈ ಪೈಕಿ 394 ಮಂದಿ ಅರ್ಹರಾಗಿದ್ದಾರೆ. ವೈದ್ಯಕೀಯ ಪರೀಕ್ಷೆಗೆ 186 ಮಂದಿ ಹಾಜರಾಗಿದ್ದರು. ಈ ಪೈಕಿ 125 ಮಂದಿ ಸೀಟು ಆಯ್ಕೆಗೆ ಅರ್ಹರಾಗಿದ್ದಾರೆ ಎಂದು ಪ್ರಾಧಿಕಾರದ ಪ್ರಕಟಣೆಗೆ ತಿಳಿಸಿದೆ.ಈಗಾಗಲೇ ನಿಗದಿಯಾಗಿರುವಂತೆ ಮಂಗಳವಾರ ಕ್ರೀಡಾ ಕೋಟಾದ ಅಡಿ ಪ್ರವೇಶ ಬಯಸಿರುವ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ನಡೆಯಲಿದೆ. ಜೂನ್ 5ರಿಂದ ಸಾಮಾನ್ಯ ಮತ್ತು ಮೀಸಲು ವರ್ಗದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಆರಂಭವಾಗಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.