ಶುಕ್ರವಾರ, ಜೂಲೈ 10, 2020
27 °C

ವಿಶ್ವಕಪ್ ಕ್ರಿಕೆಟ್ 2011: ವಿಶ್ವಕಪ್ ನಂತರ ಮುರಳಿ ನಿವೃತ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲಂಬೊ (ಐಎಎನ್‌ಎಸ್): ಶ್ರೀಲಂಕಾದ ಸ್ಪಿನ್ ಬೌಲರ್ ಮುತ್ತಯ್ಯ ಮುರಳೀಧರನ್ ಅವರು ವಿಶ್ವಕಪ್ ಕ್ರಿಕೆಟ್ ನಂತರ ನಿವೃತ್ತಿ ಹೊಂದುವ ನಿರ್ಧಾರವನ್ನು ಕೈಗೊಂಡಿದ್ದಾರೆ.

ಭಾರತ, ಶ್ರೀಲಂಕಾ ಹಾಗೂ ಬಾಂಗ್ಲಾದೇಶದಲ್ಲಿ ಫೆಬ್ರುವರಿ 19ರಿಂದ ನಡೆಯಲಿರುವ ವಿಶ್ವಕಪ್ ತಮ್ಮ ಕ್ರಿಕೆಟ್ ಜೀವನದ ಕೊನೆಯ ಟೂರ್ನಿ ಎಂದು ಮುರಳಿ ಅವರು ಶುಕ್ರವಾರ ಇಲ್ಲಿ ತಿಳಿಸಿದರು.

38 ವರ್ಷ ವಯಸ್ಸಿನ ವಿಶ್ವಖ್ಯಾತ ಸ್ಪಿನ್ನರ್ ಕಳೆದ ವರ್ಷವೇ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಟೆಸ್ಟ್‌ನಲ್ಲಿ ಎಂಟನೂರು ವಿಕೆಟ್‌ಗಳ ಸಾಧನೆ ಮಾಡಿರುವ ಅವರು ವಿಶ್ವಕಪ್ ಮುಗಿಯುವರೆಗೆ ಮಾತ್ರ ಏಕದಿನ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವರು. ಆನಂತರ ಕೇವಲ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಟೂರ್ನಿಯಲ್ಲಿ ಆಡಲಿದ್ದಾರೆ.

ಐಪಿಎಲ್ ತಂಡವಾದ ಕೊಚ್ಚಿಗೆ ಜೊತೆಗೆ ಒಪ್ಪಂದ ಮಾಡಿಕೊಂಡಿರುವ ಮುರಳಿ ಅವರು ಭಾರತದಲ್ಲಿ ಮಾತ್ರವಲ್ಲ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್‌ನಲ್ಲಿಯೂ ಚುಟುಕು ಕ್ರಿಕೆಟ್ ಲೀಗ್‌ನಲ್ಲಿ ಆಡುವುದನ್ನು ಮುಂದುವರಿಸುವ ಆಶಯ ಹೊಂದಿದ್ದಾರೆ.

‘ವಿಶ್ವಕಪ್ ನಂತರ ಮುಂದುವರಿಯುವುದಿಲ್ಲ. ಇದೇ ನನಗೆ ಕೊನೆಯ ಅಂತರರಾಷ್ಟ್ರೀಯ ಕ್ರಿಕೆಟ್ ಟೂರ್ನಿ’ ಎಂದು ಹೇಳಿದ ಆಫ್ ಸ್ಪಿನ್ನರ್ ‘ನನ್ನ ಕಾಲ ಮುಗಿಯಿತು. ಇಷ್ಟು ಸಾಕು; ವಿಶ್ವಕಪ್ ನಂತರ ಐಪಿಎಲ್‌ನಂಥ ಲೀಗ್‌ಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತೇನೆ. ಕ್ರಿಕೆಟ್ ಜೊತೆಗೆ ಸಂಪರ್ಕ ಉಳಿಸಿಕೊಳ್ಳುತ್ತೇನೆ’ ಎಂದು ನುಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.