ವಿಶ್ವಕಪ್ ಲಂಕಾ ಕೈತಪ್ಪಿದ್ದಕ್ಕೆ ಇಬ್ಬರು ಅಭಿಮಾನಿಗಳು ಆತ್ಮಹತ್ಯೆ

7

ವಿಶ್ವಕಪ್ ಲಂಕಾ ಕೈತಪ್ಪಿದ್ದಕ್ಕೆ ಇಬ್ಬರು ಅಭಿಮಾನಿಗಳು ಆತ್ಮಹತ್ಯೆ

Published:
Updated:

ಕೊಲಂಬೊ (ಪಿಟಿಐ): ಶ್ರೀಲಂಕಾ ತಂಡ ಟ್ವೆಂಟಿ-20 ವಿಶ್ವಕಪ್ ಫೈನಲ್‌ನಲ್ಲಿ ಸೋಲಕಂಡಿದ್ದಕ್ಕೆ ಈ ದೇಶದ ಇಬ್ಬರು ಕ್ರಿಕೆಟ್ ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.17ರ ಹರೆಯದ ಆಶನ್ ಲಕ್ಷಿತಾ ಹಾಗೂ 21 ವರ್ಷ ವಯಸ್ಸಿನ ಮಹೇಂದ್ರನ್ ಸುರೇಶ್ ಆತ್ಮಹತ್ಯೆ ಮಾಡಿಕೊಂಡ ಕ್ರಿಕೆಟ್ ಪ್ರೇಮಿಗಳು ಎಂದು ಪೊಲೀಸರು ತಿಳಿಸಿದ್ದಾರೆ.ಭಾನುವಾರ ರಾತ್ರಿ ಗಾಲ್ ನಗರದಲ್ಲಿ ಹಾಕಲಾಗಿದ್ದ ದೊಡ್ಡ ಪರದೆ ಮೇಲೆ ಕ್ರಿಕೆಟ್ ವೀಕ್ಷಿಸಿದ ಲಕ್ಷಿತಾ ಮನೆಗೆ ತೆರಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್‌ಇಂಡೀಸ್ ವಿರುದ್ಧದ ಫೈನಲ್‌ನಲ್ಲಿ ಸಿಂಹಳೀಯ ತಂಡ 36 ರನ್‌ಗಳಿಂದ ಸೋಲು ಕಂಡಿತ್ತು. ಹಾಗಾಗಿ ಚುಟುಕು ವಿಶ್ವಕಪ್ ಗೆಲ್ಲುವ ಕನಸು ನುಚ್ಚು ನೂರಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry