ಪಾಂಡವಪುರ: ಶಿಲ್ಪಕಲೆಗಳನ್ನು ರಚಿಸುವ ಮೂಲಕ ಭಾರತೀಯ ಸಂಸ್ಕೃತಿಗೆ ವಿಶ್ವಕರ್ಮ ಜನಾಂಗ ಮಹತ್ತರ ಕೊಡುಗೆ ನೀಡಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಎಸ್.ಪುಟ್ಟಣ್ಣಯ್ಯ ತಿಳಿಸಿದರು.

ಪಟ್ಟಣದಲ್ಲಿ ಶನಿವಾರ ವಿಶ್ವಕರ್ಮ ಸಮ್ಮೇಳನದ ಅಂಗವಾಗಿ ನಡೆದ ತಾಲ್ಲೂಕು ವಿಶ್ವಕರ್ಮ ಮಹಾಸಭಾ ಘಟಕದ ಬೈಕ್ರ್ಯಾಲಿ ಉದ್ಪಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ವಯಂ ಜ್ಞಾನದಿಂದ ಉದ್ಯೋಗ ಸೃಷ್ಟಿ ಮಾಡಿಕೊಂಡಿರುವ ವಿಶ್ವಕರ್ಮ ಜನಾಂಗದವರು ತಮ್ಮ ಕಾಯಕದ ಮೂಲಕ ಮಾನವ ಸಂಸ್ಕೃತಿಗೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ರೈತರಿಗೆ ಕೃಷಿ ಉಪಕರಣ ವಿತರಿಸಲು ಸರ್ಕಾರ ರೂ.150 ಕೋಟಿಗಳನ್ನು ಮೀಸಲಾಗಿ ಇಟ್ಟಿದೆ. ಈ ಸಬ್ಸಿಡಿ ಹಣವನ್ನು ವಿಶ್ವಕರ್ಮ ಜನಾಂಗದವರಿಗೆ ನೇರವಾಗಿ ನೀಡಿದರೆ ಲಕ್ಷಾಂತರ ಜನರಿಗೆ ಉದ್ಯೋಗ ದೊರಕಿದಂತಾಗುತ್ತದೆ ಎಂದು ಹೇಳಿದರು.

ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಜನಾಂಗಕ್ಕೆ ಅವರ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ಶಾಸಕ ಸಿ.ಎಸ್.ಪುಟ್ಟರಾಜು, ಕೆಪಿಸಿಸಿ ಸದಸ್ಯ ಎಲ್.ಡಿ.ರವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ರಾಮಕೃಷ್ಣ, ಮನ್ಮುಲ್ ನಿರ್ದೇಶಕ ಎಲ್.ಸಿ.ಮಂಜುನಾಥ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆನ್ನಾಳು ಚಂದ್ರಶೇಖರ್, ಬಿಜೆಪಿ ಮುಖಂಡ ಎಚ್.ಎನ್.ಮಂಜುನಾಥ್, ಎನ್.ಬಸವರಾಜು, ರೈತ ಸಂಘದ ಮುಖಂಡರಾದ ಡಿ.ಎಸ್.ಶಂಕರ, ಅಮೃತಿ ರಾಜಶೇಖರ್, ಹೊಸಕೋಟೆ ರಾಮೇಗೌಡ, ವಿಶ್ವಕರ್ಮ ಮಹಾಸಭಾ ತಾಲ್ಲೂಕು ಅಧ್ಯಕ್ಷ ದೇವರಾಜು, ಉಪಾಧ್ಯಕ್ಷ ಭಾಸ್ಕರಾಚಾರಿ, ಕಾರ್ಯದರ್ಶಿ ಎಸ್.ಶಿವಕುಮಾರ, ಇಂದುಮತಿ, ಲಕ್ಷಮ್ಮ,ಶೈಲ, ವನಜಾಕ್ಷಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.