ಶುಕ್ರವಾರ, ಮೇ 7, 2021
19 °C

ವಿಶ್ವಕರ್ಮ ದಿನಾಚರಣೆ ಅಂಗವಾಗಿ ವಿಶ್ವಕರ್ಮಶ್ರೀ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಭಾರತೀಯ ವಿಶ್ವಕರ್ಮ ಸೇವಾ ಪರಿಷತ್, ವಿಶ್ವಕರ್ಮ ದಿನಾಚರಣೆ ಅಂಗವಾಗಿ 2010-11ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ 75 ಅಂಕ ಪಡೆದ ಜನಾಂಗದ ವಿದ್ಯಾರ್ಥಿಗಳಿಗೆ ವಿಶ್ವಕರ್ಮಶ್ರೀ ಪ್ರಶಸ್ತಿ ನೀಡಲಾಗುವುದು.ಅಲ್ಲದೆ, ಚಲನಚಿತ್ರ, ಭರತನಾಟ್ಯ, ಯೋಗ ಪ್ರದರ್ಶನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿನ ಪ್ರತಿಭಾವಂತರು ಪ್ರತಿಭಾ ಪ್ರದರ್ಶನಕ್ಕಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತರು ಸ್ವವಿವರದೊಂದಿಗೆ ಶಾಲಾ ದಾಖಲಾತಿ, ಭಾವಚಿತ್ರವನ್ನು ಸೆ.15 ರೊಳಗೆ ಈಶ್ವರ್ ವಿಶ್ವಕರ್ಮ, ನಂ.15, 4 ನೇ ಅಡ್ಡ ರಸ್ತೆ, ಸಂಪಿಗೆ ಮುಖ್ಯ ರಸ್ತೆ, ಮಲ್ಲೇಶ್ವರಂ, ಬೆಂಗಳೂರು -560003 ಇಲ್ಲಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.9343723963 ಸಂಪರ್ಕಿಸಬಹುದು.ಪ್ರತಿಷ್ಠಾಪನೆ: ತಾಲ್ಲೂಕಿನ ಕೊಳತೂರು ಗ್ರಾಮದಲ್ಲಿ ಚೌಡೇಶ್ವರಿ ದೇವಾಲಯದ ನೂತನ ವಿಮಾನ ಗೋಪುರ ಪ್ರತಿಷ್ಠಾಪನೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಇದೇ ಸಂದರ್ಭದಲ್ಲಿ ಚೌಡೇಶ್ವರಿ, ಆಂಜನೇಯ, ಪಟಾಲಮ್ಮ ದೇವರ ಉತ್ಸವ ವಿಜೃಂಭಣೆಯಿಂದ ನಡೆಯಿತು. ಚೌಡೇಶ್ವರಿ ದೇವಿ ಟ್ರಸ್ಟ್‌ನ ಅಧ್ಯಕ್ಷ ಕೆ.ಎನ್. ಮುನಿಶಾಮಯ್ಯ, ಜಡಿಗೇನಹಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಕೆ.ಎಂ.ಕೃಷ್ಣಪ್ಪ, ಗ್ರಾಮದ ಮುಖಂಡರು ಕಾರ್ಯಕ್ರಮ ನಡೆಸಿಕೊಟ್ಟರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.