ಬೇಲೂರು: `ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರಗಳಾಗಿರುವ ಬೇಲೂರು-ಹಳೇಬೀಡು-ಶ್ರವಣಬೆಳಗೊಳಗಳನ್ನು ವಿಶ್ವ ಪರಂಪರೆ ಪಟ್ಟಿಗೆ ಸೇರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು~ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ರೇವಣ್ಣ ಹೇಳಿದರು.

ಇಲ್ಲಿನ ಪುರಸಭೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸುಮಾರು 2 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಬೇಲೂರು, ಹಳೇಬೀಡು ಮತ್ತು ಶ್ರವಣಬೆಳಗೊಳಗಳನ್ನು ವಿಶ್ವ ಪರಂಪರೆ ಪಟ್ಟಿಗೆ ಸೇರ್ಪಡೆ ಮಾಡುವ ಸಂಬಂಧ ತಾವು ಸಚಿವರಾಗಿದ್ದ ಅವಧಿಯಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಆ ನಂತರ ಬಂದವರು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ವಿಶ್ವ ಪರಂಪರೆ ಪಟ್ಟಿಗೆ ಸೇರಿಸಲು ದೇವೇಗೌಡರ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು~ ಎಂದರು.

ಶಾಸಕ ವೈ.ಎನ್. ರುದ್ರೇಶ್ಗೌಡ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಪಟೇಲ್ ಶಿವರಾಂ, ಜಿ.ಪಂ. ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ಮಾಜಿ ಸಂಸದ ಎಚ್.ಕೆ.ಜವರೇಗೌಡ, ಪುರಸಭಾಧ್ಯಕ್ಷ ಎಚ್.ಎಂ.ದಯಾನಂದ್, ತಾ.ಪಂ. ಅಧ್ಯಕ್ಷೆ ಕಮಲ ಚನ್ನಪ್ಪ, ಜಿ.ಪಂ. ಸದಸ್ಯರಾದ ಎಂ.ವಿ.ಹೇಮಾವತಿ, ಜಿ.ಟಿ.ಇಂದಿರಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.