ಬುಧವಾರ, ಏಪ್ರಿಲ್ 14, 2021
31 °C

ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕಾರ್ಯ ನಿರ್ವಹಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ನ್ಯಾಯಾಂಗ ಇಲಾಖೆ ನೌಕರರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಡಾ. ಶಶಿಕಲಾ ಎಂ.ಎ. ಉರಣ್ಕರ್ ಕರೆ ನೀಡಿದರು.ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಜನರಿಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ಅಪಾರ ನಿರೀಕ್ಷೆ ಇದೆ. ಅದೇ ನಿರೀಕ್ಷೆ ನ್ಯಾಯಾಂಗ ಇಲಾಖೆ ನೌಕರರ ಮೇಲೆ ಇರುತ್ತದೆ. ಆ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕಾರ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.ಸಹಕಾರ ಸಂಘಗಳು ಪ್ರಜಾಪ್ರಭುತ್ವದ ಪ್ರತಿಬಿಂಬ. ಇತರ ನೌಕರರ ಸಂಘಕ್ಕಿಂತ ನ್ಯಾಯಾಂಗ ಇಲಾಖೆ ನೌಕರರ ಸಂಘ ವಿಭಿನ್ನವಾಗಿರಬೇಕು. ಪರಸ್ಪರ ಸಹಕಾರ ಇದ್ದರೆ ಮಾತ್ರ ಏಳ್ಗೆ ಸಾಧ್ಯ ಎಂದರು.ಶಾಸಕ ಎಸ್.ಕೆ. ಬಸವರಾಜನ್ ಮಾತನಾಡಿ, ಪದಾಧಿಕಾರಿಗಳ ಅಪ್ರಮಾಣಿಕತೆಯಿಂದ ಸಹಕಾರ ಸಂಘಗಳು ಮುಳುಗುತ್ತಿವೆ. ಹಲವು ಸಲ ಕಾನೂನುಬಾಹಿರವಾಗಿ ಸಾಲ ನೀಡುತ್ತಿರುವುದರಿಂದ ನೆಲಕಚ್ಚುತ್ತಿವೆ ಎಂದು ವಿಷಾದಿಸಿದರು.ನ್ಯಾಯಾಂಗ ವ್ಯವಸ್ಥೆ ಮೇಲೆ ಜನರು ಬಲವಾದ ನಂಬಿಕೆ ಹೊಂದಿದ್ದಾರೆ. ಈ ವಿಶ್ವಾಸಕ್ಕೆ ಯಾವುದೇ ಕಾರಣಕ್ಕೂ ಧಕ್ಕೆ ಬರಬಾರದು ಎಂದರು.ನ್ಯಾಯಾಧೀಶರಾದ ಸಾವಿತ್ರಿ ವಿನಾಯಕ, ಸಹಕಾರ ಸಂಘಗಳ ಉಪ ನಿಬಂಧಕ ಇಲ್ಯಾಸ್ ಉಲ್ ಷರೀಫ್ ಹಾಜರಿದ್ದರು. ಸಿ.ಬಿ. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೃಷ್ಣಪ್ಪ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದವರನ್ನು ಸನ್ಮಾನಿಸಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.