ವಿಶ್ವ ಅಂಗವಿಕಲರ ದಿನಾಚರಣೆ ಇಂದು

7

ವಿಶ್ವ ಅಂಗವಿಕಲರ ದಿನಾಚರಣೆ ಇಂದು

Published:
Updated:

ಚಾಮರಾಜನಗರ: ಬದನಗುಪ್ಪೆ ಮತ್ತು ಹೆಗ್ಗೋಠಾರ ಗ್ರಾಮ ಪಂಚಾಯಿತಿ, ಕಾವೇರಿ ಅಂಗವಿಕಲರ ಮಹಾಸಂಘ ಹಾಗೂ ಮೊಬಿಲಿಟಿ ಇಂಡಿಯಾದಿಂದ ತಾಲ್ಲೂಕಿನ ಬದನಗುಪ್ಪೆ ಗ್ರಾಮದಲ್ಲಿ ಡಿ.12ರಂದು ಬೆಳಿಗ್ಗೆ 11ಗಂಟೆಗೆ ವಿಶ್ವ ಅಂಗವಿಕಲರ ದಿನಾಚರಣೆ ಹಾಗೂ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿದೆ.ಬೆಳಿಗ್ಗೆ 10.30ಕ್ಕೆ ಕಾಳೇಶ್ವರ ದೇವಸ್ಥಾನದಿಂದ ಜಾಥಾ ಆರಂಭವಾಗಲಿದೆ. ಹೆಗ್ಗೋಠಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಕೆ. ದೇವರಾಜು ಅವರು ಚಾಲನೆ ನೀಡಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಿ. ನಾಗಶ್ರೀ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಬದನಗುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ಗಫಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲ್ಲೂಕು ಪಂಚಾಯಿತಿ ಸದಸ್ಯರಾದ ಕಾಂತಮಣಿ, ಗೌಡಿಕೆ ಮಾದಪ್ಪ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಎಚ್.ಕೆ. ರೇವಣೇಶ್, ಬದನಗುಪ್ಪೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಿಕ್ಕಮಾದಯ್ಯ, ಹೆಗ್ಗೋಠಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಬ್ಬಶೆಟ್ಟಿ, ಕೆನರಾ ಬ್ಯಾಂಕ್ ವ್ಯವಸ್ಥಾಪಕ ರಮೇಶ್, ಮೊಬಿಲಿಟಿ ಇಂಡಿಯಾ ವ್ಯವಸ್ಥಾಪಕ ಎಸ್.ಎನ್. ಆನಂದ್, ಚಿಗುರು ಅಂಗವಿಕಲರ ಒಕ್ಕೂಟ ಮತ್ತು ಕಾವೇರಿ ಅಂಗವಿಕತರ ಮಹಾಸಂಘದ ಅಧ್ಯಕ್ಷೆ ಜಯಮ್ಮ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry