ಶುಕ್ರವಾರ, ನವೆಂಬರ್ 22, 2019
20 °C

ವಿಶ್ವ ಆರೋಗ್ಯ ದಿನಾಚರಣೆ ನಾಳೆ

Published:
Updated:

ಉಡುಪಿ: ರಾಜ್ಯದ ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರ ಸಂಘದ ಉಡುಪಿ ಜಿಲ್ಲಾ ಶಾಖೆಯ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯನ್ನು ಶಾರದಾ ಇಂಟರ್‌ನ್ಯಾಷನಲ್ ಹೋಟೆಲ್‌ನಲ್ಲಿ ಇದೇ 7ರಂದ ಏರ್ಪಡಿಸಲಾಗಿದೆ.ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಎಸ್.ಎ. ಪ್ರಭಾಕರ ಶರ್ಮ ಕಾರ್ಯಕ್ರಮದ ಉದ್ಘಾಟಿಸುವರು. ಆರೋಗ್ಯ ಸಹಾಯಕರ ಸಂಘದ ಅಧ್ಯಕ್ಷ ಆನಂದ ಗೌಡ ಅಧ್ಯಕ್ಷತೆ ವಹಿಸುವರು.ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮಚಂದ್ರ ಬಾಯರಿ, ಆರೋಗ್ಯ ಸಹಾಯಕರ ಸಂಘದ ಅಧ್ಯಕ್ಷ ಬಿ.ಎಚ್ ಗಂಗಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಭಾಗವಹಿಸುವರು.

ಪ್ರತಿಕ್ರಿಯಿಸಿ (+)