ಗುರುವಾರ , ಮೇ 13, 2021
16 °C

ವಿಶ್ವ ಕುಂಚಿಟಿಗರ ಮಹಾ ಸಮ್ಮೇಳನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಶ್ವ ಕುಂಚಿಟಿಗರ ಮಹಾ ಸಮ್ಮೇಳನ ಸಮಿತಿಯು ಏಪ್ರಿಲ್ 27 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಅರಮನೆ ಮೈದಾನದಲ್ಲಿ ವಿಶ್ವ ಕುಂಚಿಟಿಗರ ಮಹಾ ಸಮ್ಮೇಳನವನ್ನು ಆಯೋಜಿಸಿದೆ.ಸಮ್ಮೇಳನದಲ್ಲಿ ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಒರಿಸ್ಸಾ ಸೇರಿದಂತೆ ವಿವಿಧ ರಾಜ್ಯಗಳ ಕುಂಚಿಟಿಗ ಜನಾಂಗದವರು ಭಾಗವಹಿಸಲಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಎನ್.ದೇವರಾಜಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಸುಗಮ ಸಂಗೀತ, ಹಾಸ್ಯೋತ್ಸವ, ಜನಪದ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ, ಪ್ರಧಾನ ಸಂಚಾಲಕ ಟಿ.ರಾಮಾಂಜಿನಪ್ಪ, ಡಿ.ಪ್ರಕಾಶ್ ಇತರರು ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.