ಮಂಗಳವಾರ, ಮೇ 18, 2021
22 °C

ವಿಶ್ವ ಪರಂಪರೆ ಪಟ್ಟಿಗೆ ಬೇಲೂರು: ಪ್ರಸ್ತಾವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಳೇಬೀಡು: `ಬೇಲೂರು, ಹಳೇಬೀಡು ಮತ್ತು ಶ್ರವಣಬೆಳಗೊಳವನ್ನು ವಿಶ್ವ ಪರಂಪರೆ ಪಟ್ಟಿಗೆ ಸೇರಿಸಲು ಕೇಂದ್ರ ಪುರಾತತ್ವ ಸರ್ವೇಕ್ಷಣಾ ಇಲಾಖೆ ಯುನೆಸ್ಕೊಗೆ ಪ್ರಸ್ತಾವನೆ ಸಲ್ಲಿಸಿದೆ~ ಕೇಂದ್ರ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಹಾಯಕ ಸಂರಕ್ಷಣಾಧಿಕಾರಿ ಟಿ. ಶರವಣನ್ ತಿಳಿಸಿದರು.ಹೊಯ್ಸಳೇಶ್ವರ ದೇವಾಲಯ ಆವರಣದಲ್ಲಿ ಬುಧವಾರ ನಡೆದ ವಿಶ್ವ ಪರಂಪರೆ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಯುನೆಸ್ಕೊ ತಂಡ ಈ ಮೂರು ತಾಣಗಳ ಅಧ್ಯಯನ ನಡೆಸಿ ವರದಿ ಸಲ್ಲಿಸಿದೆ. ಯುನೆಸ್ಕೊ ಸಂಸ್ಥೆ ತಾಣಗಳನ್ನು ವಿಶ್ವಪರಂಪರೆ ಪಟ್ಟಿಗೆ ಒಳಪಡಿಸಿದರೆ, ಇಲ್ಲಿಯ ಸ್ಮಾರಕಗಳು ಮಾತ್ರವಲ್ಲದೆ ಊರುಗಳು ಸಹ ಅಭಿವೃದ್ಧಿ ಹೊಂದುತ್ತವೆ. ಪ್ರವಾಸಿಗರ ಸಂಖ್ಯೆ ಹೆಚ್ಚಾಗಿ ಸ್ಥಳೀಯ ಉದ್ಯಮಗಳು ಬೆಳೆಯುತ್ತವೆ ಎಂದರು.ಪುರಾತತ್ವ ಅಧಿಕಾರಿ ಪಿ. ಅರವಳ್ಳಿ ಮಾತನಾಡಿ, ಕೇದಾರೇಶ್ವರ ದೇವಾಲಯ ಬಳಿ ಇರುವ ಖಾಸಗಿ ಜಮೀನಿನಲ್ಲಿ ಅಂತರರಾಷ್ಟ್ರೀಯ ಸಂಗ್ರಹಾಲಯ ನಿರ್ಮಿಸಲು ಪುರಾತತ್ವ ಇಲಾಖೆ ಚಿಂತನೆ ನಡೆಸಿದೆ. ಸಂಗ್ರಹಾಲಯ ಮೇಲ್ದರ್ಜೆಗೆ ಪರಿವರ್ತನೆಯಾದರೆ ಹೊಯ್ಸಳೇಶ್ವರ, ಕೇದಾರೇಶ್ವರ ದೇವಾಲಯ, ಜೈನ ಬಸದಿಗಳು ಹಾಗೂ ಮ್ಯೂಸಿಯಂ ವೀಕ್ಷಣೆಗೆ ಪ್ರವಾಸಿಗರಿಗೆ ಅನುಕೂಲವಾಗುತ್ತದೆ. ಪ್ರಾಚೀನ ಸ್ಮಾರಕಗಳ ಅಭಿವೃದ್ಧಿಗೆ ಸ್ಥಳೀಯರ ಸಹಕಾರ ಅಗತ್ಯ ಎಂದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಆರ್. ಲಿಂಗಪ್ಪ ಪ್ರೇಮಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಉದ್ಯಾನವನ ಅಧಿಕಾರಿ ಪ್ರಭಾವತಿ ಹಾಗೂ ಪ್ರವಾಸಿ ಮಾರ್ಗದರ್ಶಿಗಳು ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.