ಸೋಮವಾರಪೇಟೆ: ಒಡಿಪಿ ಸಂಸ್ಥೆ ಹಾಗೂ ತಾಲ್ಲೂಕು ಜಲಾನಯನ ಸಮಿತಿಗಳ ಒಕ್ಕೂಟದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಜಾಥಾ ಬುಧವಾರ ಪಟ್ಟಣದಲ್ಲಿ ನಡೆಯಿತು.

ಸೋಮೇಶ್ವರ ದೇವಾಲಯದ ಸಮೀಪ, ಪರಿಸರ ಜಾಗೃತಿ ಜಾಥಾಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಂಜನ್ ಚಾಲನೆ ನೀಡಿದರು. ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಜಲಾನಯನ ಸಮಿತಿಗಳ ಸದಸ್ಯರು, ಸ್ವಯಂ ಸೇವಕರು, ಪಟ್ಟಣ ಪಂಚಾಯಿತಿ ನೌಕರರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿರುವ ಒಣಕಸ, ಪ್ಲಾಸ್ಟಿಕ್ ಸಂಗ್ರಹಿಸುವ ಮೂಲಕ ಜನರಲ್ಲಿ ಅರಿವು ಮೂಡಿಸಿದರು. ಒಕ್ಕೂಟದ ಅಧ್ಯಕ್ಷ ಎಸ್.ಎಂ.ಡಿಸಿಲ್ವಾ. ಪಟ್ಟಣ ಪಂಚಾಯಿತಿ ಆರೋಗ್ಯಾಧಿಕಾರಿ ಉದಯ್ ಕುಮಾರ್, ಒಡಿಪಿ ಸಂಸ್ಥೆಯ ಕ್ಷೇತ್ರಾಧಿಕಾರಿ ಮಸಗೋಡು ದಯಾನಂದ, ವಲಯಾಧಿಕಾರಿ ವಿನ್ಸಿ, ಸನತ್ ಭಾಗವಹಿಸಿದ್ದರು.

ಬೇಳೂರು: ಸೋಮವಾರಪೇಟೆ ಸಮೀಪದ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ವಿಶ್ವ ಪರಿಸರ ದಿನ ಆಚರಿಸಲಾಯಿತು. ಅತಿಥಿಗಳಾಗಿ ಪಾಲ್ಗೊಂಡಿದ್ದ ಟಾಟಾ ಕಾಫಿ ಸಂಸ್ಥೆಯ ಹಿರಿಯ ವ್ಯವಸ್ಥಾಪಕರಾದ ಬೆಳ್ಳಿಯಪ್ಪ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ತಲಾ ಒಂದು ಗಿಡವನ್ನು ನೆಟ್ಟು ಪೋಷಣೆ ಮಾಡುವ ಮೂಲಕ ಪರಿಸರವನ್ನು ಉಳಿಸಿ ಬೆಳೆಸುವತ್ತ ಗಮನಹರಿಸಬೇಕೆಂದರು.

ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಪಿ, ಮಹದೇವ್, ಎಸ್ಡಿಎಂಸಿ ಅಧ್ಯಕ್ಷ ಶಾಂತಪ್ಪ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೇಶವ ಮೂರ್ತಿ, ಮುಖ್ಯ ಶಿಕ್ಷಕಿ ವಿ.ಆರ್. ರುಕ್ಮಿಣಿ ದೈಹಿಕ ಶಿಕ್ಷಣ ಶಿಕ್ಷಕ, ಕೃಷ್ಣಪ್ಪ, ಮತ್ತು ಟಾಟಾ ಸಂಸ್ಥೆಯ ಸಿಬ್ಬಂದಿ ಇದ್ದರು. ಇದೇ ಸಂದರ್ಭ ಟಾಟಾ ಸಂಸ್ಥೆಯ ವತಿಯಿಂದ ಶಾಲೆಗೆ ಉಚಿತವಾಗಿ ರೂ. 85 ಸಾವಿರ ಮೌಲ್ಯದ ಗಣಕಯಂತ್ರದ ಕುರ್ಚಿ ಮತ್ತು ಮೇಜನ್ನು ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.