ಶನಿವಾರ, ಮೇ 15, 2021
22 °C

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್: ಸೆಪ್ಟೆಂಬರ್ 22ರಿಂದ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ/ಐಎಎನ್‌ಎಸ್):  ಬೀಜಿಂಗ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕಂಚು ಜಯಿಸಿದ್ದ ವಿಜೇಂದರ್ ಸಿಂಗ್ ಹಾಗೂ ಅಖಿಲ್ ಕುಮಾರ್ ಅವರು ಸೆಪ್ಟಂಬರ್ 22ರಿಂದ ಅಜರ್‌ಬೈಜಾನ್‌ನ ಬಾಕುವಿನಲ್ಲಿ ನಡೆಯಲಿರುವ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸುವ  ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಚ್ಚರಿಯ ಬೆಳವಣಿಗೆಯಲ್ಲಿ ಯುವ ರಾಷ್ಟ್ರೀಯ ಚಾಂಪಿಯನ್ ದೇವೆಂದ್ರೂ ಸಿಂಗ್  ಸಹ ಸ್ಥಾನ ಗಿಟ್ಟಿಸಿದ್ದಾರೆ. ಇತ್ತೀಚಿಗೆ 49 ಕೆ.ಜಿ. ಲೈಟ್ ಫ್ಲೇ ವೇಟ್ ವಿಭಾಗದಲ್ಲಿ ಅವರು ಏಷ್ಯನ್ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಗೆದ್ದಿದ್ದ ಅಮನ್‌ದೀಪ್ ಸಿಂಗ್ ಅವರನ್ನು ಮಣಿಸಿದ್ದರು.ಏಷ್ಯನ್ ಕ್ರೀಡಾಕೂಟದಲ್ಲಿ ಪದಕ ಗೆದ್ದಿದ್ದ ಮನಪ್ರೀತ್ ಸಿಂಗ್, ಪರಮಜೀತ್ ಸಮೋಟಾ ಸಹ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 2012ರ ಲಂಡನ್ ಒಲಿಂಪಿಕ್‌ಗೆ ಅರ್ಹತೆ ಪಡೆಯಲು ಮೊದಲ ಅವಕಾಶ ಇದಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.