ಗುರುವಾರ , ಜೂನ್ 24, 2021
25 °C

ವಿಷಕಾರಿ ಬಣ್ಣ: ಬಾಲಕನ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ):  ಹೋಳಿ ಹಬ್ಬದ ಅಂಗವಾಗಿ ಪರಸ್ಪರ ಬಣ್ಣ ಎರಚಾಡಿಕೊಂಡ ಸಂದರ್ಭದಲ್ಲಿ ವಾಕರಿಕೆ ಮತ್ತು ಅಲರ್ಜಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ 100ಕ್ಕೂ ಹೆಚ್ಚು ಮಕ್ಕಳು ಮತ್ತು ಹಿರಿಯರಲ್ಲಿ ಒಬ್ಬ ಬಾಲಕ ಮೃತಪಟ್ಟಿದ್ದಾನೆ.ವಿಷಕಾರಿ ಬಣ್ಣದಿಂದಾಗಿ ವಿಕಾಸ್ ವಾಲ್ಮೀಕಿ (13) ರಾಜಾವಾಡಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಆದೇಶಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿ ಐ.ಎಸ್.ಚಹಾಲ್ ನೇತೃತ್ವದ ಸಮಿತಿ ತನಿಖೆ ನಡೆಸಲಿದ್ದು, ಹದಿನಾಲ್ಕು ದಿನಗಳೊಳಗೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಆದೇಶಿಸಿದ್ದಾರೆ.ಗುರುವಾರ ಬಣ್ಣ ಎರಚಾಟದ ವೇಳೆ  ಸುಮಾರು 190 ಮಂದಿ ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ದಾಖಲಾಗಿರುವವರಲ್ಲಿ ಬಹುತೇಕರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಬಾಲಕನ ಸಾವಿಗೆ ಕಾರಣವಾದ ಬಣ್ಣದ ಹಿಂದಿನ ರಹಸ್ಯವನ್ನು ಪೊಲೀಸರು ಮತ್ತು ವೈದ್ಯರು ಇನ್ನಷ್ಟೇ ಭೇದಿಸಬೇಕಾಗಿದೆ.ನಿರ್ಲಕ್ಷ್ಯ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಕ್ಕಳು ಬಣ್ಣವನ್ನು ಖರೀದಿಸಿದ ಅಂಗಡಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.