ಶುಕ್ರವಾರ, ಆಗಸ್ಟ್ 7, 2020
25 °C

ವಿಷಾಹಾರ ಸೇವನೆ: ಶ್ರುತಿ ಆಸ್ಪತ್ರೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಷಾಹಾರ ಸೇವನೆ: ಶ್ರುತಿ ಆಸ್ಪತ್ರೆಗೆ

ಬೆಂಗಳೂರು: ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡ ನಟಿ ಶ್ರುತಿ ಅವರನ್ನು ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.ವಾಂತಿ-ಭೇದಿಯಿಂದಾಗಿ ಅಸ್ವಸ್ಥಗೊಂಡಿದ್ದ ಶ್ರುತಿ ಅವರನ್ನು ಶುಕ್ರವಾರ ಮಧ್ಯಾಹ್ನ ಬಸವೇಶ್ವರನಗರದ ಪುಣ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಚಿಕಿತ್ಸೆ ನೀಡಿದ ವೈದ್ಯೆ ಪುಣ್ಯ ನಾಗರಾಜ್, `ವಿಷಾಹಾರ ಸೇವನೆಯಿಂದ ಅವರು ಅಸ್ವಸ್ಥಗೊಂಡಿದ್ದಾರೆ. ಶೀಘ್ರವೇ ಅವರು ಗುಣಮುಖರಾಗಲಿದ್ದಾರೆ' ಎಂದು ಹೇಳಿದ್ದಾರೆ.`ಪತ್ರಕರ್ತ ಚಂದ್ರಚೂಡ್ ಜತೆಗಿನ ಎರಡನೇ ಮದುವೆ ವಿವಾದದಿಂದ ಬೇಸರಗೊಂಡು ಶ್ರುತಿ ಅವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ' ಎಂದು ನಗರದಲ್ಲಿ ಶುಕ್ರವಾರ ವದಂತಿ ಹರಡಿತ್ತು. ಈ ಸಂಗತಿ ತಿಳಿದ ಕಾಮಾಕ್ಷಿಪಾಳ್ಯ ಪೊಲೀಸರು, ಕೂಡಲೇ ಆಸ್ಪತ್ರೆಗೆ ತೆರಳಿ ವೈದ್ಯರಿಂದ ಮಾಹಿತಿ ಪಡೆದು ಕೊಂಡರು.`ಮೂರು ದಿನಗಳ ಹಿಂದೆ ಶಿರಡಿಗೆ ಹೋಗಿದ್ದೆ. ಗುರುವಾರ ನಗರಕ್ಕೆ ವಾಪಸ್ ಬರುವಾಗ ಮಾರ್ಗ ಮಧ್ಯೆ ಡಾಬಾವೊಂದರಲ್ಲಿ ಊಟ ಮಾಡಿದೆ. ಇದರಿಂದ ಊಟದಲ್ಲಿ ವ್ಯತ್ಯಾಸವಾಗಿ ಬೆಳಿಗ್ಗೆಯಿಂದ ವಾಂತಿ-ಭೇದಿ ಆಯಿತು. ಆತ್ಮಹತ್ಯೆ ಮಾಡಿಕೊಳ್ಳುವಂತಹದ್ದು ಏನೂ ಆಗಿಲ್ಲ' ಎಂದು ಶ್ರುತಿ ಅವರು ಪೊಲೀಸರಿಗೆ ಹೇಳಿಕೆ ಕೊಟ್ಟಿದ್ದಾರೆ.ಆಸ್ಪತ್ರೆಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ, ಶ್ರುತಿ ಅವರ ಆರೋಗ್ಯ ವಿಚಾರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.