ಭಾನುವಾರ, ಮೇ 16, 2021
26 °C

ವೀಚಿ ಪ್ರಶಸ್ತಿಗೆ ಸಾಹಿತ್ಯ ಕೃತಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ವೀಚಿ ಸಾಹಿತ್ಯ ಪ್ರಶಸ್ತಿಗೆ ಕನ್ನಡ ಸಾಹಿತ್ಯ ಕೃತಿಗಳನ್ನು ವೀಚಿ ಸಾಹಿತ್ಯ ಪ್ರತಿಷ್ಠಾನ ಆಹ್ವಾನಿಸಿದೆ. ಪ್ರಶಸ್ತಿ ಆಯ್ಕೆಗಾಗಿ 2010ರಲ್ಲಿ ಪ್ರಕಟವಾದ ಕೃತಿಗಳನ್ನು ಪರಿಗಣಿಸಲಾಗುತ್ತದೆ. ಪ್ರಶಸ್ತಿ ಆಯ್ಕೆಗೆ ಸಾಹಿತ್ಯದ ಎಲ್ಲ ಪ್ರಾಕಾರಗಳಿಗೂ ಅವಕಾಶವಿದೆ.ಆಸಕ್ತರು ಪುಸ್ತಕದ ಎರಡು ಪ್ರತಿಗಳನ್ನು ಅ.31ರೊಳಗೆ ಕಾರ್ಯದರ್ಶಿ, ವೀಚಿ ಸಾಹಿತ್ಯ ಪ್ರತಿಷ್ಠಾನ, ಸಂಜೀವಿನಿ ಆಯುರ್ವೇದ ಆಸ್ಪತ್ರೆ, ಜನರಲ್ ಕಾರ್ಯಪ್ಪ ರಸ್ತೆ, ಕೃಷ್ಣರಾಜೇಂದ್ರ ಬಡಾವಣೆ, ತುಮಕೂರು- ಈ ವಿಳಾಸಕ್ಕೆ ಕಳುಹಿಸಬೇಕು. ಪ್ರಶಸ್ತಿ ರೂ. 10 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ವಿವರಗಳಿಗೆ ಮೊಬೈಲ್: 9845157308 ಸಂಪರ್ಕಿಸುವಂತೆ ಪ್ರತಿಷ್ಠಾನದ ಕಾರ್ಯದರ್ಶಿ ಎಂ.ಎಚ್.ನಾಗರಾಜು ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.