ಶನಿವಾರ, ಮೇ 28, 2022
25 °C

ವೀರಭದ್ರಸ್ವಾಮಿ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿರುವ ಹುಲುಕಡಿಯಲ್ಲಿ ಭದ್ರಕಾಳಮ್ಮ , ವೀರಭದ್ರಸ್ವಾಮಿ ಬ್ರಹ್ಮರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ಜಾತ್ರೆಯಲ್ಲಿ ವೀರಗಾಸೆ ಕುಣಿತ ಹಾಗೂ ವಿವಿಧ ಜಾನಪದ ಕಲೆಗಳ ಪ್ರದರ್ಶನ ಗಮನ ಸೆಳೆಯಿತು. ಬೆಟ್ಟದ ಮೇಲಿರುವ ವೀರಭದ್ರಸ್ವಾಮಿ ದರ್ಶನಕ್ಕೆ ಬೆಳಗಿನಿಂದಲೇ ಭಕ್ತರು ಸಾಲುಗಟ್ಟಿ ನಿಂತು ದರ್ಶನ ಪಡೆದರು.ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಆಶೀರ್ವಚನ ನೀಡಿ ನಮ್ಮ ಸಾಂಸ್ಕೃತಿಕ ಸಂವೇದನೆಗೆ ಪೂರಕವಾಗುವ ರಥೋತ್ಸವ, ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳು ದೈವ ಭಕ್ತಿಯೊಂದಿಗೆ ಜನರಲ್ಲಿ ಐಕ್ಯತೆ ಮೂಡಿಸಲು ನೆರವಾಗುತ್ತವೆ ಎಂದರು. ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರಾಭಿವೃದ್ದಿ ಟ್ರಸ್ಟ್‌ನ ನರಸಿಂಹಯ್ಯ, ಕಾರ್ಯದರ್ಶಿ ಮಾರೇಗೌಡ, ವಿನಯ್‌ಕುಮಾರ್ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿದ್ದರು. ಜಾತ್ರೆಯಲ್ಲಿ ಭಾಗವಹಿಸುವ ಉತ್ತಮ ರಾಸುಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.