ವೀರಯೋಧನನ್ನು ಮರೆತ ತಾಲ್ಲೂಕು ಆಡಳಿತ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ವೀರಯೋಧನನ್ನು ಮರೆತ ತಾಲ್ಲೂಕು ಆಡಳಿತ

Published:
Updated:

ಶಹಾಪುರ: ತಾಲ್ಲೂಕಿನ ಸಗರ ಗ್ರಾಮದ ವೀರಯೋಧ ಸುಭಾಸಚಂದ್ರ ಮಡಿವಾಳ ಕೆಲ ತಿಂಗಳ ಹಿಂದೆ ಛತ್ತಿಸಗಡದ ದತ್ತೆಂವಾಡದಲ್ಲಿ ನಕ್ಸಲ್ ಗುಂಡಿಗೆ ಬಲಿಯಾಗಿ ವೀರ ಮರಣವನ್ನು ಅಪ್ಪಿದ್ದರು. ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಕೊನೆ ಪಕ್ಷ ವೀರಯೋಧನ ಕುಟುಂಬದ ಸದಸ್ಯರನ್ನು ಕರೆಸಿ ಗೌರವ ಸೂಚಿಸಬೇಕಾಗಿತ್ತು. ತಾಲ್ಲೂಕು ಆಡಳಿತ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಿದೆ ಎಂದು ತಾಲ್ಲೂಕು ಸಿಪಿಐ(ಎಂ) ಕಾರ್ಯದರ್ಶಿ ಎಸ್.ಎಂ. ಸಾಗರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ದೇಶ ರಕ್ಷಣೆಗೆ ಪ್ರಾಣ ತ್ಯಾಗ ಮಾಡಿದ ಸುಭಾಸಚಂದ್ರನ ಬಡ ಕುಟುಂಬಕ್ಕೆ ನೆರವಿನ ಅಭಯವನ್ನು ನೀಡಬೇಕಾಗಿತ್ತು. ಸೈನಿಕ ವಿಶೇಷ ಕೋಟಾದ ಅಡಿಯಲ್ಲಿ  ಭೂಮಿಯನ್ನು ಸುಭಾಸಚಂದ್ರನ ಕುಟುಂಬಕ್ಕೆ ಮಂಜೂರು ಮಾಡಬೇಕಾಗಿತ್ತು. ತಾಲ್ಲೂಕು ದಂಡಾಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ಅವರು ದೂರಿದ್ದಾರೆ.ಅಂದಿನ ಸಭೆಯಲ್ಲಿ ಶಾಸಕರು ಕೂಡಾ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಕೊನೆ ಪಕ್ಷ ಸಗರ ಯೋಧನ ಬಗ್ಗೆ ಮಾತನಾಡಲು ಕೂಡಾ ಪುರಸೊತ್ತು ಇಲ್ಲವಾಗಿದೆ. ತಕ್ಷಣ ಸುಭಾಸಚಂದ್ರನ ಕುಟುಂಬಕ್ಕೆ ಅಗತ್ಯ ನೆರವು ನೀಡಿ ಗೌರವಿಸಬೇಕೆಂದು ಅವರು ಆಗ್ರಹಿಸಿದ್ದಾರೆ.ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಿಂದ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ವೇದಿಕೆ ಅಲಂಕರಿಸಿ ಶಿಷ್ಟಾಚಾರವನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಸಭೆಯಲ್ಲಿ ಯಾವುದೇ ಸ್ಥಾನ ಮಾನಕ್ಕೆ ಬೆಲೆಯಿಲ್ಲದೆಂತೆ ವರ್ತಿಸುತ್ತಿರುವುದು ಸರಿಯಲ್ಲ. ಮುಂದೆ ಇಂತಹ ಪ್ರಮಾದ ಆಗದಂತೆ ತಾಲ್ಲೂಕು ಆಡಳಿತ ಎಚ್ಚರ ವಹಿಸಬೇಕೆಂದು ತಿಳಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry