ಸೋಮವಾರ, ಜೂನ್ 21, 2021
30 °C

ವೀರಾಂಜನೇಯ ಸ್ವಾಮಿ ಬ್ರಹ್ಮರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ನಗರದ ಹೊರವಲಯದ ಕನಂಪಲ್ಲಿ ಪಂಚಮುಖಿ ವೀರಾಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ಸೋಮವಾರ ಶ್ರದ್ಧಾ ಭಕ್ತಿಯಿಂದ ನಡೆಯಿತು.ರಥೋತ್ಸವದ ಅಂಗವಾಗಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಅಲಂಕಾರ ಹಾಗೂ ವಿವಿಧ ಅಭಿಷೇಕಗಳು ನಡೆದವು. ಬೆಳಿಗ್ಗೆಯಿಂದಲೇ ಜನರು ದೇವಾಲಯದಲ್ಲಿ ಸಾಲುಗಟ್ಟಿ ನಿಂತು ಪೂಜೆ ಮಾಡಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಉತ್ಸವದುದ್ದಕ್ಕೂ ವೀರಾಂಜನೇಯ ಸ್ವಾಮಿ ಕುರಿತು ಕೇಳಿಬಂದ ಸ್ತೋತ್ರಗಳು ಹಾಗೂ ಹಾಡುಗಳು ಭಕ್ತರನ್ನು ಭಾವಪರವಶಗೊಳಿಸಿದವು.ಮಧ್ಯಾಹ್ನ ವಿಶೇಷ ಪೂಜೆ ನಂತರ ಅಲಂಕರಿಸಿದ್ದ ರಥದಲ್ಲಿ ವೀರಾಂಜನೇಯ ಸ್ವಾಮಿಯ ಉತ್ಸವ ಮೂರ್ತಿ ಇಟ್ಟು ವಿಶೇಷ ಪೂಜೆ ನೆರವೇರಿಸಿದ ನಂತರ ನೂರಾರು ಜನರ ಸಮ್ಮುಖದಲ್ಲಿ ರಥವನ್ನು ಎಳೆಯಲಾಯಿತು.ದೇವಾಲಯದ ಸುತ್ತಲೂ ರಥದ ಪ್ರದಕ್ಷಿಣೆ ನಡೆಯಿತು. ನಗರ ಹಾಗೂ ಸುತ್ತಮುತ್ತಲ ಊರುಗಳಿಂದ ಆಗಮಿಸಿದ್ದ ಭಕ್ತರು ಬಾಳೆಹಣ್ಣು, ದವನವನ್ನು ರಥಕ್ಕೆ ಅರ್ಪಿಸಿದರು. ಭಕ್ತಾದಿಗಳಿಗೆ ದೇಗುಲದ ವತಿಯಿಂದ ಅನ್ನಸಂತರ್ಪಣೆ ನಡೆಯಿತು.ದೇಗುಲದ ಮುಂಭಾಗದಲ್ಲಿ ವಿವಿಧ ಬಗೆಯ ತಿಂಡಿ ತಿನಿಸುಗಳು, ಆಟಿಕೆ ಸಾಮಾನುಗಳು, ಅಲಂಕಾರಿಕ ವಸ್ತುಗಳ ಮಾರಾಟ ಭರ್ಜರಿಯಾಗಿ ನಡೆಯಿತು. ದೇಗುಲವು ರಾತ್ರಿಯಿಡೀ ವಿದ್ಯುತ್ ದೀಪಗಳಿಂದ ಕಂಗೊಳಿಸಿತ್ತು.

ಮಾಜಿ ಸಚಿವ ಚೌಡರೆಡ್ಡಿ, ತಹಶೀಲ್ದಾರ್ ಕೃಷ್ಣಮೂರ್ತಿ ಮತ್ತಿತರರು ಭಾಗವಹಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.