ಗುರುವಾರ , ಮೇ 6, 2021
21 °C

ವೀರ ವನಿತೆಯರ ಆದರ್ಶ: ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: `ವೀರ ವನಿತೆಯರಾದ ರಾಣಿ ಅಬ್ಬಕ್ಕ, ಲಕ್ಷ್ಮೀಬಾಯಿ, ಒನಕೆ ಓಬವ್ವ, ರಾಣಿ ಚೆನ್ನಮ್ಮ ಅವರಂತಹ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಪಕ್ಷದ ಸಂಘಟನೆ ಹಾಗೂ ಸಮಾಜದ ಶ್ರೇಯಸ್ಸಿಗೆ ದುಡಿಯಬೇಕು ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ರೀನಾ ಪ್ರಕಾಶ್ ಎಂದರು.ಬಿಜೆಪಿ ಪಕ್ಷದ ಮಹಿಳಾ ಮೋರ್ಚಾ ಘಟಕದ ವತಿಯಿಂದ ತಾಲ್ಲೂಕಿನ ಕೈವಾರದಲ್ಲಿ ಭಾನುವಾರ ಆರಂಭ ವಾದ ಎರಡು ದಿನಗಳ ಪರಿಚಯ ವರ್ಗ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ತಾಲ್ಲೂಕು ಘಟಕದ ಅಧ್ಯಕ್ಷ ನಾ.ಶಂಕರ್ ಮಾತನಾಡಿ, ಕಾರ್ಯ ಕರ್ತರು ಸದಾ ಜನರೊಂದಿಗೆ ಸಂಪರ್ಕ ಇದ್ದರೆ ಮಾತ್ರ ಪಕ್ಷದ ಬಲವರ್ಧನೆ ಸಾಧ್ಯ ಎಂದು ಅಭಿಪ್ರಾಯ ಪಟ್ಟರು.ಸತ್ಯನಾರಾಯಣ ಮಹೇಶ್, ಪ್ರತಿ ಯೊಂದು ಹಂತದಲ್ಲೂ  ಕಾರ್ಯ ಕರ್ತರು ಶಿಸ್ತುಬದ್ಧವಾಗಿ ಪ್ರಾಮಾಣಿಕತೆ ಯಿಂದ ಕೆಲಸ ಮಾಡ ಬೇಕು ಎಂದರು.ಜಿಲ್ಲಾ ಘಟಕದ ಅಧ್ಯಕ್ಷ ರವಿ ನಾರಾ ಯಣ ರೆಡ್ಡಿ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಭು ಕಪ್ಪಗಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಗೀತಾ ವಿವೇಕ್, ಉಪಾಧ್ಯಕ್ಷೆ  ಶಾರದಾ ಚಂದ್ರಶೇಖರ್, ಕಾರ್ಯದರ್ಶಿ ಭಾಗ್ಯಜ್ಯೋತಿ, ಗೀತಾ ಧನಂಜಯ್, ವನಿತಾನಾರಾಯಣ್ ಇತರರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.