ಸೋಮವಾರ, ಮೇ 10, 2021
25 °C

ವೀ.ವಿ. ಸಂಘದ ಚುನಾವಣೆ: ಶೇ 90 ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಮಂಡಳಿ ಚುನಾವಣೆ ನಗರದ ಶೆಟ್ಟರ ಗುರುಶಾಂತಪ್ಪ ಕಾಲೇಜು ಆವರಣದಲ್ಲಿ ಭಾನುವಾರ ನಡೆಯಿತು.ಕಾರ್ಯಕಾರಿ ಮಂಡಳಿಗೆ 30 ಜನರನ್ನು ಆಯ್ಕೆ ಮಾಡಲು ಒಟ್ಟು 2,860 ಜನ ಸದಸ್ಯರ ಪೈಕಿ ಶೇ 90ರಷ್ಟು ಮತದಾನ ನಡೆಯಿತು.ಸಂಗನಬಸವ ಸ್ವಾಮೀಜಿ, ಮೇಯರ್ ಪಾರ್ವತಿ ಇಂದುಶೇಖರ್, ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಂ.ಪಿ. ರವೀಂದ್ರ ಮತ್ತಿತರರು ಮತದಾನ ಮಾಡಿದ ಪ್ರಮುಖರಾಗಿದ್ದಾರೆ.ಸಾಹಿತಿ ಕುಂ.ವೀರಭದ್ರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುತ್ತಿನನೂರು ವಿರೂಪಾಕ್ಷಗೌಡ, ಜಿ.ಪಂ. ಮಾಜಿ ಅಧ್ಯಕ್ಷ ಎನ್.ರುದ್ರಗೌಡ ಮತ್ತಿತರರು ಚುನಾವಣೆಯಲ್ಲಿ ಸ್ಪರ್ಧಿಸಿದ ಪ್ರಮುಖರಾಗಿದ್ದು, ಸೋಮವಾರ ಮತ ಎಣಿಕೆ ಕಾರ್ಯ ನಡೆಯಲಿದೆ. ಸಂಘವು ಬಳ್ಳಾರಿ ಜಿಲ್ಲೆ ಹಾಗೂ ದಾವಣಗೆರೆ ಜಿಲ್ಲೆಯ ಹರಪನಹಳ್ಳಿಗಳಲ್ಲಿ ಒಟ್ಟು 41 ಶಿಕ್ಷಣ ಸಂಸ್ಥೆಗಳನ್ನು ಹೊಂದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.