ಬುಧವಾರ, ನವೆಂಬರ್ 20, 2019
27 °C

ವೀಸಾಗೆ ಲಾಟರಿ

Published:
Updated:

ವಾಷಿಂಗ್ಟನ್ (ಪಿಟಿಐ):ನಿರೀಕ್ಷೆಯಂತೆ ಈ ಬಾರಿ ಎಚ್1ಬಿ ಉದ್ಯೋಗ ವೀಸಾ ಕೋರಿ ನಿಗದಿತ 65 ಸಾವಿರಕ್ಕಿಂತ ಹೆಚ್ಚು ಅರ್ಜಿಗಳು ಬಂದಿದ್ದು, ಇನ್ನು ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಅಮೆರಿಕದ ಪೌರತ್ವ ಮತ್ತು ವಲಸೆ ವಿಭಾಗದ ಅಧಿಕಾರಿಗಳು ಪ್ರಕಟಿಸಿದ್ದಾರೆ.ಕಂಪ್ಯೂಟರ್ ನೆರವಿನಿಂದ ಲಾಟರಿ ಮೂಲಕ ಅದೃಷ್ಟಶಾಲಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿರುವ ಅಧಿಕಾರಿಗಳು, ಲಾಟರಿ ದಿನಾಂಕವನ್ನು ಇನ್ನೂ ನಿರ್ಧರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಕ್ರಿಯಿಸಿ (+)