ಬುಧವಾರ, ಮೇ 12, 2021
24 °C

ವೃತ್ತಿಪರ ಕೋರ್ಸ್: ಇಂದಿನಿಂದ ದಾಖಲೆ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೈದ್ಯಕೀಯ/ದಂತ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹರಾಗಿರುವ ವಿದ್ಯಾರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಬುಧವಾರದಿಂದ ರಾಜ್ಯದ 13 ಸಹಾಯವಾಣಿ ಕೇಂದ್ರಗಳಲ್ಲಿ ನಡೆಯಲಿದೆ.ಒಂದರಿಂದ ಎರಡು ಸಾವಿರ ರ‌್ಯಾಂಕ್‌ವರೆಗಿನ ವಿದ್ಯಾರ್ಥಿಗಳಿಗೆ ಬುಧವಾರ ನಿಗದಿತ ಕೇಂದ್ರಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ. ದಾಖಲೆಗಳ ಪರಿಶೀಲನೆಯ ವಿವರವಾದ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.ಜೂನ್ 5ರಿಂದ 23ರವರೆಗೆ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸಾಮಾನ್ಯ ವರ್ಗ ಹಾಗೂ ವಿವಿಧ ಪ್ರವರ್ಗಗಳ ಮೀಸಲಾತಿ ಕೋಟಾದಡಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು.ವಿಶೇಷ ಪ್ರವರ್ಗದಡಿ ಅಂದರೆ ಎನ್‌ಸಿಸಿ ಮತ್ತು ಅಂಗವಿಕಲರ ಕೋಟಾದಡಿ ಪ್ರವೇಶ ಬಯಸಿರುವ ವಿದ್ಯಾರ್ಥಿಗಳಿಗೆ ಜೂನ್ 3ರಂದು ಹಾಗೂ ಕ್ರೀಡಾ ಕೋಟಾದಡಿ ಪ್ರವೇಶ ಬಯಸಿರುವ ವಿದ್ಯಾರ್ಥಿಗಳಿಗೆ ಜೂನ್ 4ರಂದು ಮೂಲ ದಾಖಲೆಗಳ ಪರಿಶೀಲನೆ ನಡೆಯಿತು.13 ಕೇಂದ್ರಗಳ ವಿವರ, ಯಾವ ದಿನ ಎಷ್ಟು ರ‌್ಯಾಂಕ್‌ವರೆಗಿನ ವಿದ್ಯಾರ್ಥಿಗಳು ಹಾಜಬೇಕು. ಯಾವ ಯಾವ ದಾಖಲೆಗಳನ್ನು ತರಬೇಕು ಎಂಬ ವಿವರಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ವೆಬ್‌ಸೈಟ್ ವಿಳಾಸ: http://kea.kar.nic.in

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.