`ವೃತ್ತಿಪರ ಶಿಕ್ಷಣಕ್ಕೆ ಆದ್ಯತೆ ನೀಡಿ'

7

`ವೃತ್ತಿಪರ ಶಿಕ್ಷಣಕ್ಕೆ ಆದ್ಯತೆ ನೀಡಿ'

Published:
Updated:

ಸಾಲಿಗ್ರಾಮ: ಜಾಗತೀಕರಣದಿಂದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳ ಹೆಬ್ಬಾಗಿಲು ತೆರೆಯುತ್ತಿದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣ ಪಡೆಯುವಾಗ ಉದ್ಯೋಗಕ್ಕೆ ಪೂರಕವಾಗುವ ವಿಷಯವನ್ನು ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡಬೇಕು ಎಂದು ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಅರುಣೇಶ್ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ `ಸಿ.ಕೆ. ಪ್ರಹ್ಲಾದ್ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ವಿದ್ಯಾರ್ಥಿ ವೇದಿಕೆ' ಆಯೋಜಿಸಿದ್ದ 2013-14ನೇ ಸಾಲಿನ ಚಟುವಟಿಕೆಗಳ ಕಾರ್ಯಾಗಾರದಲ್ಲಿ ಮಾತನಾಡಿದರು.ಪಿರಿಯಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ತ್ರಿಣೇಶ್ ಮಾತನಾಡಿ, ಭಾರತದಲ್ಲಿ ಬಂಡವಾಳ ಹೂಡಿಕೆದಾರರ ಕೊರತೆ ಇದೆ. ಆದ್ದರಿಂದ ದೇಶದ ಆರ್ಥಿಕ ಪರಿಸ್ಥಿತಿ ಏರುಪೇರಾಗುತ್ತಿದೆ. ಸ್ಥಿತಿವಂತರು ಬಂಡವಾಳ ಹೂಡಿಕೆ ಮಾಡುವ ಮೂಲಕ ದೇಶದಲ್ಲಿ ಬಂಡವಾಳ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.ಕಾಲೇಜಿನ ಪ್ರಾಂಶುಪಾಲ ಎಸ್.ಜೆ. ಪ್ರಕಾಶ್ ಮಾತನಾಡಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಶಂಕರ್, ಪ್ರಾಧ್ಯಾಪಕರಾದ ಡಾ.ಸತೀಶ್‌ಚಂದ್ರ, ಮಿರ್ಲೆ ಮೃತ್ಯುಂಜಯ, ಶಿವಕುಮಾರಸ್ವಾಮಿ, ಸ್ಪಿನ್‌ಕೃಷ್ಣ, ಕೃಷ್ಣೇಗೌಡ, ಜಗದೀಶ್, ಶ್ರೀಕಾಂತ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry