ಭಾನುವಾರ, ಜೂನ್ 13, 2021
25 °C
ರಾಷ್ಟ್ರೀಯ ಕೌಶಲಾಭಿವೃದ್ಧಿ ಅಕಾಡೆಮಿ ಕಟ್ಟಡಕ್ಕೆ ಶಂಕುಸ್ಥಾಪನೆ

ವೃತ್ತಿ ಶಿಕ್ಷಣಕ್ಕೆ ಹೆಚ್ಚು ಒತ್ತು: ದೇಶಪಾಂಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾಂಡೇಲಿ: ‘ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರವು ವೃತ್ತಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಈ ಅಕಾಡೆಮಿ ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸಲಿದ್ದು, ವಿಶೇಷವಾಗಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ವೃತ್ತಿಪರ ತರಬೇತಿ ನೀಡುವ ಉದ್ದೇಶ ಹೊಂದಿದೆ’ ಎಂದು ಉನ್ನತ ಶಿಕ್ಷಣ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದರು.ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾ ಲಯದ ವತಿಯಿಂದ ನಗರದಲ್ಲಿ ಸ್ಥಾಪಿತವಾಗುತ್ತಿರುವ ವಿಟಿಯು ರಾಷ್ಟ್ರೀಯ ಕೌಶಲಾಭಿವೃದ್ಧಿ ಅಕಾಡೆಮಿಯ ಕಟ್ಟಡಕ್ಕೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.‘ಅಕಾಡೆಮಿ ಸ್ಥಾಪಿಸಲು ಅವಶ್ಯವಿರುವ 10 ಎಕರೆ ಭೂ ಪ್ರದೇಶವನ್ನು ರಾಜ್ಯ ಸರ್ಕಾರ ವಿಶ್ವವಿದ್ಯಾಲಯಕ್ಕೆ ಮಂಜೂರು ಮಾಡಿದೆ’ ಎಂದರು.ವಿಶ್ವವಿದ್ಯಾಯಲಯದ ಕುಲಪತಿ ಡಾ.ಎಚ್. ಮಹೇಶಪ್ಪ ಮಾತನಾಡಿ, ‘ಪ್ರಸ್ತತ ಎಂಜಿನಿಯರಿಂಗ್ ಪದವಿ ಮುಗಿಸಿದವರಲ್ಲಿ ಶೇ 30 ರಷ್ಟು ಮಂದಿ ಮಾತ್ರ ಕೆಲಸ ಪಡೆಯುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಉಳಿದ ಶೇ 70 ರಷ್ಟು ಜನ ನಿರುದ್ಯೋಗಿಗ ಳಾಗುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಕೌಶಲ ಕೊರತೆ. ಈ ಸಮಸ್ಯೆ ನೀಗಿಸಲು ವಿದ್ಯಾರ್ಥಿಗಳಿಗೆ ಪದವಿ ಜೊತೆಗೆ ಕೌಶಲ ತರಬೇತಿ ನೀಡಿ ಅವರಲ್ಲಿನ ಕೊರತೆಗಳನ್ನು ನೀಗಿಸಿ ಅವರನ್ನು ಕಾರ್ಪೊರೇಟ್‌ ಪ್ರಪಂಚಕ್ಕೆ ಸನ್ನದ್ಧರಾಗಿಸುವುದು ಅಗತ್ಯವಾಗಿದೆ’ ಎಂದರು. ಕರ್ನಾಟಕ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ಆರ್. ಶಿವಕುಮಾರ್ ಹಾಗೂ ದಾಂಡೇಲಿ ವೆಸ್ಟ್ ಕೋಸ್ಟ್ ಪೇಪರ್ ಮಿಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಎಲ್. ಚಂಡಕ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ದಾಂಡೇಲಿ ನಗರಸಭಾ ಅಧ್ಯಕ್ಷೆ ದೀಪಾ ಮಾರಿಹಾಳ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಕುಲಸಚಿವರಾದ ಡಾ.ಕೆ.ಇ. ಪ್ರಕಾಶ, ಡಾ.ಎಚ್.ಜಿ. ಶೇಖರಪ್ಪ  ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.