ಸೋಮವಾರ, ಮೇ 17, 2021
23 °C

ವೃತ್ತಿ ಶಿಕ್ಷಣ ಪ್ರವೇಶ:ಪ್ರಕ್ರಿಯೆ: ಸರ್ಕಾರದ ಸೂತ್ರಕ್ಕೆ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೈದ್ಯಕೀಯ/ ದಂತ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವೃತ್ತಿ ಶಿಕ್ಷಣ ಕೋರ್ಸ್‌ಗಳ ಸೀಟು ಹಂಚಿಕೆ ಮತ್ತು ಪ್ರವೇಶ ಶುಲ್ಕ ನಿಗದಿ ಸಂಬಂಧ ಸರ್ಕಾರ ಸಿದ್ಧಪಡಿಸಿರುವ ಸೂತ್ರವನ್ನು ಒಪ್ಪಿಕೊಳ್ಳಲು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ನಿರ್ಧರಿಸಿದೆ.ಹಿಂದಿನ ವರ್ಷ ಅನುಸರಿಸಿದ ಮಾದರಿಯಲ್ಲೇ ಸೀಟು ಹಂಚಿಕೆ ಹಾಗೂ ಪ್ರವೇಶ ಶುಲ್ಕದಲ್ಲಿ ಶೇಕಡ 10ರಷ್ಟು ಹೆಚ್ಚಳ ಮಾಡುವ ಸೂತ್ರವನ್ನು ಸರ್ಕಾರ ಶನಿವಾರ ನಡೆದ ಸಭೆಯಲ್ಲಿ ಮುಂದಿಟ್ಟಿತು. ಭಾನುವಾರ ನಗರದಲ್ಲಿ ನಡೆದ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದು, ಸರ್ಕಾರದ ತೀರ್ಮಾನವನ್ನು ಒಪ್ಪಿಕೊಳ್ಳುವ ನಿರ್ಧಾರಕ್ಕೆ ಬರಲಾಗಿದೆ.ಸಭೆ ಬಳಿಕ `ಪ್ರಜಾವಾಣಿ~ ಜೊತೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಡಾ.ಎಂ.ಕೆ.ಪಾಂಡುರಂಗ ಶೆಟ್ಟಿ, `ಸರ್ಕಾರ ನಿಗದಿಪಡಿಸಿರುವ ಸೂತ್ರವನ್ನು ಒಪ್ಪಿಕೊಳ್ಳಲು ಒಕ್ಕೂಟದ ಸದಸ್ಯರು ತೀರ್ಮಾನಿಸಿದ್ದಾರೆ. ಪ್ರವೇಶ ಪ್ರಕ್ರಿಯೆ ನಡೆಸಲು ಹೆಚ್ಚಿನ ಕಾಲಾವಕಾಶ ಇಲ್ಲದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ~ ಎಂದರು.`ಸರ್ಕಾರ ಮತ್ತು ಖಾಸಗಿ ಕಾಲೇಜುಗಳ ನಡುವೆ ಸ್ವಲ್ಪ ಮೊದಲೇ ಮಾತುಕತೆ ಆರಂಭವಾಗಬೇಕಿತ್ತು. ಈಗ ಮಾತುಕತೆಗೆ ಚಾಲನೆ ದೊರೆತಿರುವುದರಿಂದ ಹೆಚ್ಚಿನ ಅವಧಿ ತೆಗೆದುಕೊಳ್ಳಲು ಅವಕಾಶವಿಲ್ಲ. ಇನ್ನೇನು ಕೆಲವೇ ದಿನಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಇಂತಹ ಸ್ಥಿತಿಯಲ್ಲಿ ತಕ್ಷಣವೇ ನಿರ್ಧಾರಕ್ಕೆ ಬರಬೇಕಾಗುತ್ತದೆ. ಆದ್ದರಿಂದ ಸರ್ಕಾರದ ಸೂತ್ರ ಒಪ್ಪಿಕೊಳ್ಳುವ ಇಂಗಿತವನ್ನು ಒಕ್ಕೂಟದ ಬಹುತೇಕ ಸದಸ್ಯರು ವ್ಯಕ್ತಪಡಿಸಿದರು~ ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.