ಶನಿವಾರ, ಜೂನ್ 19, 2021
22 °C

ವೇತನಕ್ಕಾಗಿ ಕಂಪ್ಯೂಟರ್ ಶಿಕ್ಷಕರ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯ ಶಾಲಾ, ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪ್ಯೂಟರ್ ಶಿಕ್ಷಕರಿಗೆ ಬಾಕಿ ಉಳಿಸಿಕೊಂಡಿರುವ ವೇತನವನ್ನು ನೀಡಬೇಕು ಎಂದು ಆಗ್ರಹಿಸಿ ಶಿಕ್ಷಕರ ಸಂಘದ ಸದಸ್ಯರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆವರಣದಲ್ಲಿ ಸೋಮವಾರ ಧರಣಿ ನಡೆಸಿದರು.ಹೊರಗುತ್ತಿಗೆ ಮೂಲಕ ಶಿಕ್ಷಕರನ್ನು ನೇಮಿಸಿಕೊಂಡಿರುವ `ಎಡ್ಯುಕಾಂ~ ಸಂಸ್ಥೆಯು ಕೆಲವು ತಿಂಗಳಿಂದ ವೇತನವನ್ನು ನೀಡದೆ ಸತಾಯಿಸುತ್ತಿದೆ. ವೇತನ ನೀಡಬೇಕು ಎಂದು ಕೋರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸಂಸ್ಥೆ ವ್ಯವಸ್ಥಾಪಕರಿಗೆ ಮನವಿ ಮಾಡಿದರೂ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ವೇತನ ನೀಡದ ಹಿನ್ನೆಲೆಯಲ್ಲಿ ಕಂಪ್ಯೂಟರ್ ಪರೀಕ್ಷೆಯ ಮೌಲ್ಯಮಾಪನ ಬಹಿಷ್ಕರಿಸಿದ್ದೇವೆ. ಡಯಟ್ ಪ್ರಾಚಾರ್ಯರಿಗೂ ಮಾಹಿತಿ ನೀಡಲಾಗಿದೆ. ಆದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.ಶಿಕ್ಷಕರು ಧರಣಿ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ತಮ್ಮ ಕೊಠಡಿಯಿಂದ ಹೊರಬಂದ ತರಬೇತಿ ಸಂಸ್ಥೆ ಪ್ರಾಚಾರ್ಯ ಮಹಮದ್ ಬಷೀರ್, ಶಿಕ್ಷಕರು ಈ ರೀತಿ ಸಂಸ್ಥೆ ಆವರಣದಲ್ಲಿ ಧರಣಿ ನಡೆಸುವುದು ಸರಿಯಲ್ಲ. ಹೊರಹೋಗಿ ಧರಣಿ ನಡೆಸಿ ಎಂದು ಆಕ್ಷೇಪಿಸಿದರು. ವೇತನ ನೀಡುವುದು ಸಂಸ್ಥೆ ಜವಾಬ್ದಾರಿ ಅಲ್ಲ. ಹೀಗಾಗಿ ಹೊರಗುತ್ತಿಗೆ ಸಂಸ್ಥೆ ಬಳಿ ಹೋಗಿ ಧರಣಿ ನಡೆಸುವುದು ಉಚಿತ ಎಂದು ಸಲಹೆ ನೀಡಿದರು.  ಇದೇ ವೇಳೆ ಧರಣಿನಿರತರು ಮತ್ತು ಪೊಲೀಸ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆಯಿತು. ನಂತರವೂ ಕೆಲಕಾಲ ಶಿಕ್ಷಕರುಧರಣಿ ನಡೆಸಿದರು. ಸಂಘದ ಅಧ್ಯಕ್ಷ ಮಂಜುನಾಥ್ ನೇತೃತ್ವ ವಹಿಸಿದ್ದರು.

------------

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.