ಶನಿವಾರ, ಮಾರ್ಚ್ 6, 2021
32 °C
ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧಾರ

ವೇತನ ಆಯೋಗ ಜಾರಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವೇತನ ಆಯೋಗ ಜಾರಿಗೆ ಆಗ್ರಹ

ಗದಗ: ಕೇಂದ್ರದ ಮಾದರಿಯಲ್ಲಿಯೇ ರಾಜ್ಯ ಸರ್ಕಾರಿ ನೌಕರರಿಗೂ 7ನೇ ವೇತನ ಆಯೋಗದ ವರದಿ ಜಾರಿಗೊಳಿಸಬೇಕು. ಇಲ್ಲದಿದ್ದರೇ ಸರ್ಕಾರದ ವಿರುದ್ಧ ಅನಿವಾರ್ಯವಾಗಿ ಹೋರಾಟ ಮಾಡಲಾಗುವುದು ಎಂದು ಸರ್ಕಾರಿ ನೌಕರ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ರವಿ ಗುಂಜಿಕರ ಹೇಳಿದರು.ನಗರದ ಸರ್ಕಾರಿ ನೌಕರ ಭವನದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ನೌಕರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ರಾಜ್ಯಾಧ್ಯಕ್ಷರ ನಿಯೋಗದೊಂದಿಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಚುನಾವಣೆ ನಂತರ   ಚರ್ಚಿಸುವ ಭರವಸೆ ನೀಡಿದ್ದಾರೆ. ಬೇಡಿಕೆ ಈಡೇರದಿದ್ದರೆ ಸರ್ಕಾರದ ವಿರುದ್ಧ ಸಂಘಟನಾತ್ಮಕ ಹೋರಾಟ ನಡೆಸಲಾಗುವುದು. ಮೊದಲ ಹಂತವಾಗಿ ಬೆಂಗಳೂರು ಹಾಗೂ ಬಿಜಾಪೂರದ ಇಂಡಿಯಲ್ಲಿ ವಿಭಾಗ ಮಟ್ಟದ ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಮೈಸೂರು ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೋರಾಟದ ರೂಪುರೇಶೆ ಸಿದ್ಧಪಡಿಸಲಾಗುವದು ಎಂದು ತಿಳಿಸಿದರು.ಬೇನಾಮಿ ವ್ಯಕ್ತಿಗಳ ಹೆಸರಲ್ಲಿ ಸರ್ಕಾರಿ ನೌಕರರು ಆಸ್ತಿ ಮಾಡಿರುವ ಬಗ್ಗೆ ಆಧಾರರಹಿತ ದೂರುಗಳು ಕೇಳಿ ಬರುತ್ತಿವೆ. ಸೂಕ್ತ ಸಾಕ್ಷ್ಯ ದೊರೆತರೆ ಮಾತ್ರ ಮೇಲಧಿಕಾರಿಗಳು ನೌಕರರನ್ನು ವಿಚಾರಣೆಗೆ ಒಳಪಡಿಸಬೇಕು. ನೌಕರರಿಗೆ ಆಧಾರ ಕಾರ್ಡ್‌ ಸೌಲಭ್ಯ ಕಲ್ಪಿಸಲು ನೌಕರ ಭವನದಲ್ಲಿ ಆಧಾರ ಕಿಟ್ ಸೌಲಭ್ಯ ಕಲ್ಪಿಸಲಾಗಿದೆ.2015-16 ನೇ ಸಾಲಿನ ಜಿಲ್ಲಾ ಮಟ್ಟದ ಸರ್ಕಾರಿ ನೌಕರ ವರ್ಗದ ಕ್ರೀಡಾಕೂಟಕ್ಕೆ ಬೇಕಾದ ಎಲ್ಲ ರೀತಿಯ ಸಾಮಾಗ್ರಿಗಳನ್ನು ಯುವಜನ ಸಬಲೀಕರಣ ಇಲಾಖೆ ನೀಡಲಿದೆ.  ಸದಸ್ಯತ್ವ ಪಡೆದ ನೌಕರರ ಶುಲ್ಕವನ್ನು ಜನವರಿ ಅಥವಾ ಫೆಬ್ರುವರಿ ತಿಂಗಳಿನ ವೇತನದಲ್ಲಿ ಕಡಿತಗೊಳಿಸಲಾಗುವುದು ಎಂದರು. ಪದಾಧಿಕಾರಿಗಳಾದ ಎಸ್.ಎನ್.ಬಳ್ಳಾರಿ, ಭಾವಿಕಟ್ಟಿ. ಬಸವರಾಜ ಬಳ್ಳಾರಿ  ಹಾಜರಿದ್ದರು.ಸರ್ವೋತ್ತಮ ಪ್ರಶಸ್ತಿ ಕೇವಲ ಎ.ಬಿ.ಸಿ ನೌಕರ ವರ್ಗಕ್ಕೆ ಮೀಸಲಿರಿಸದೆ, ಜನಪರ ಸೇವೆ ಸಲ್ಲಿಸುತ್ತಿರುವ ನೌಕರರಿಗೂ ದೊರಕಬೇಕು.

ರವಿ ಗುಂಜಿಕರ,

ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.