ಶುಕ್ರವಾರ, ಮೇ 14, 2021
25 °C

ವೇತನ ತಾರತಮ್ಯ ನಿವಾರಣೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ವೇತನ ತಾರತಮ್ಯ ನಿವಾರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಒಕ್ಕೂಟದ ಜಿಲ್ಲಾ ಶಾಖೆಯ ವತಿಯಿಂದ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಉಪನ್ಯಾಸಕರು ಸೋಮವಾರ ಪ್ರತಿಭಟನೆ ನಡೆಸಿದರು.ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ 4 ಮತ್ತು 5ನೇ ವೇತನ ಆಯೋಗದ ಜಾರಿಂುು ವೇಳೆ ವೇತನ ನಿಗದಿ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ನೀಡುವಲ್ಲಿ  ತಾರತಮ್ಯ ಎಸಗಲಾಗಿದ್ದು, ಈ ತಾರತಮ್ಯವನ್ನು ಸರ್ಕಾರ ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದರು.ವೇತನ ತಾರತಮ್ಯ ನಿವಾರಿಸುವಂತೆ ಈಗಾಗಲೇ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಏಪ್ರಿಲ್‌ನಲ್ಲಿ  ದ್ವಿತೀಯ ಪಿಯು ಪರೀಕ್ಷೆ ಮೌಲ್ಯಮಾಪನವನ್ನು ಪದವಿಪೂರ್ವ ಉಪನ್ಯಾಸಕರು ಬಹಿಷ್ಕರಿಸಿದ್ದರು. ಈ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೇತನ  ತಾರತಮ್ಯ ಅಧ್ಯಯನ ಸಮಿತಿಯನ್ನು ನೇಮಕ ಮಾಡಿ ಅದು ನೀಡುವ ವರದಿಯ ಆಧಾರದ ವೇಲೆ  ಸಮಸ್ಯೆಯನ್ನು ಪರಿಹರಿಸುವ ಭರವಸೆ ನೀಡಿದ್ದರು ಎಂದು ತಿಳಿಸಿದರು.ಸದ್ಯ ವೇತನ ತಾರತಮ್ಯ ಸಮಿತಿ ತನ್ನ ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಎರಡು ತಿಂಗಳಾದರೂ ಕೂಡ ಸರ್ಕಾರ ಯಾವುದೇ ಕ್ರಮತೆಗೆದುಕೊಳ್ಳದೇ ಪದವಿಪೂರ್ವ ಕಾಲೇಜು ಉಪನ್ಯಾಸಕರು ಮತ್ತು ಪ್ರಾಂಶುಪಾಲರನ್ನು ಗೊಂದಲಕ್ಕೆ ಸಿಲುಕಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಸರ್ಕಾರ ಈ ನಿಟ್ಟಿನಲ್ಲಿ ಕೂಡಲೇ  ಎಚ್ಚೆತ್ತುಕೊಂಡು ವೇತನ ತಾರತಮ್ಯ ನಿವಾರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಸ್. ಶಿರೂರ, ಕಾರ್ಯದರ್ಶಿ ಮಹೇಶ ಜಕ್ಕಣ್ಣವರ, ಬಸವರಾಜ ಕೋಷ್ಠಿ, ಎಸ್.ಐ. ಛಬ್ಬಿ, ಸಿ.ಎಸ್. ಕಟ್ಟಿಮನಿ, ಪಿ.ವಿ. ಜತ್ತಿ,  ಡಿ.ಜಿ. ಜತ್ತಿ, ನಾಗರತ್ನ  ಸೇರಿದಂತೆ  ಜಿಲ್ಲೆಯ ವಿವಿಧ ಪದವಿಪೂರ್ವ ಕಾಲೇಜುಗಳ  ನೂರಾರು ಉಪನ್ಯಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.