ಬುಧವಾರ, ಜುಲೈ 28, 2021
23 °C

ವೇತನ ತಾರತಮ್ಯ ನಿವಾರಣೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಒಕ್ಕೂಟದ ಚಿತ್ರದುರ್ಗ ಮತ್ತು ಶಿವಮೊಗ್ಗ ಘಟಕಗಳ ಪದಾಧಿಕಾರಿಗಳು ಸಂಯುಕ್ತವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ವೇತನ ತಾರತಮ್ಯ ನಿವಾರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವೇತನ ಹಾಗೂ ಪದವಿ ಕಾಲೇಜು ಉಪನ್ಯಾಸಕರ ವೇತನದ ತಾರತಮ್ಯ ಹಾಗೂ ಇತರೆ ರಾಜ್ಯಗಳಲ್ಲಿ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ ನೀಡುವ ವೇತನವನ್ನು ಮುಖ್ಯಮಂತ್ರಿಗೆ ವಿವರಿಸಿದರು.ಒಕ್ಕೂಟದ ಪದಾಧಿಕಾರಿಗಳಾದ ಆರ್. ಮಂಜುನಾಥ್, ಈಶ್ವರಮೂರ್ತಿ, ಎಸ್. ಲಕ್ಷ್ಮಣ್, ಬಿ. ಹನುಮಂತರಾಯ, ಟಿ. ಜಯಂತ್ ಮತ್ತಿತರರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.