ವೇತನ ತಾರತಮ್ಯ ಬೇಡ: ಮಾಜಿ ಶಾಸಕ ಕೆ.ಸಿ.ಪುಟ್ಟಸಿದ್ದಶೆಟ್ಟಿ

7

ವೇತನ ತಾರತಮ್ಯ ಬೇಡ: ಮಾಜಿ ಶಾಸಕ ಕೆ.ಸಿ.ಪುಟ್ಟಸಿದ್ದಶೆಟ್ಟಿ

Published:
Updated:

ತುಮಕೂರು: ಕೇಂದ್ರ ಸರ್ಕಾರಕ್ಕೆ ಸಮಾನವಾದ ವೇತನ, ಬಡ್ತಿ ಮತ್ತು ಇತರೆ ಸೌಲಭ್ಯಗಳನ್ನು ರಾಜ್ಯ ಸರ್ಕಾರಿ ನೌಕರರು, ಶಿಕ್ಷಕರಿಗೂ ನೀಡಬೇಕು. ಈ ನಿಟ್ಟಿನಲ್ಲಿ ಕೂಡಲೇ ಆರನೇ ವೇತನ ಆಯೋಗ ಜಾರಿಯಾಗಬೇಕು ಎಂದು ಮಾಜಿ ಶಾಸಕ ಕೆ.ಸಿ.ಪುಟ್ಟಸಿದ್ದಶೆಟ್ಟಿ ಆಗ್ರಹಿಸಿದರು.ಪ್ರತಿ ಐದು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಆಗುತ್ತದೆ. 2005 ಜುಲೈ ಒಂದರಿಂದ ಐದನೇ ವೇತನ ಶಿಫಾರಸು ಜಾರಿಯಾಗಿ ಆರು ವರ್ಷ ಕಳೆದಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ದ್ವಿಗುಣಗೊಳ್ಳುತ್ತಿದೆ. ಈ ದೆಸೆಯಲ್ಲಿ 6ನೇ ಆಯೋಗ ಜಾರಿ ಅತಿ ಅವಶ್ಯವಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಕೇಂದ್ರ ಸರ್ಕಾರ ತನ್ನ ನೌಕರರಿಗೆ ನೀಡುವ ವೇತನವನ್ನು ರಾಜ್ಯ ನೌಕರರಿಗೂ ಅನ್ವಯವಾಗಬೇಕಾಗಿದೆ. ಆಯವ್ಯಯ  ಮಂಡನೆಯಲ್ಲಿ ಮುಖ್ಯಮಂತ್ರಿ ಈ ಕುರಿತು ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ರಾಜ್ಯದಲ್ಲಿ ಈಗಾಗಲೇ ವೇತನ ಆಯೋಗ ಜಾರಿಯಾಗಿದೆ ಎಂದು ಅವರು ತಿಳಿಸಿದರು.

 ಕೇಂದ್ರ ಸರ್ಕಾರಿ ನೌಕರರಿಗಿಂತ ಶೇ. 40ರಷ್ಟು ಕಡಿಮೆ ವೇತನವನ್ನು ರಾಜ್ಯದ ನೌಕರರು ಪಡೆಯುತ್ತಿರುವುದು ವಿಷಾದಕರ ಎಂದು ಅವರು ಬೇಸರ ವ್ಯಕ್ತಪಡಿಸಿದರು.ಇದೇ ಸಂದರ್ಭದಲ್ಲಿ ಪ್ರೌಢಶಾಲಾ ಶಿಕ್ಷಕ, ಪದವಿ ಪೂರ್ವ ಕಾಲೇಜು ಉಪನ್ಯಾಸಕರು ವೇತನ ತಾರತಮ್ಯ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಜೆಟ್ ಅಧಿವೇಶನದಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಸಂಘದ ಅಧ್ಯಕ್ಷ ಜಿ.ನಾರಾಯಣಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಎಂ.ವಿಶ್ವೇಶ್ವರಯ್ಯ ಇತರ ಪದಾಧಿಕಾರಿಗಳು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry