ಸೋಮವಾರ, ಏಪ್ರಿಲ್ 12, 2021
26 °C

ವೇತನ ಹೆಚ್ಚಳಕ್ಕೆ ಗುತ್ತಿಗೆ ನೌಕರರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: 6ನೇ ವೇತನ ಶ್ರೇಣಿಯನ್ನು ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿಯ ಗುತ್ತಿಗೆ ನೌಕರರು ಬೆಳಗಾವಿಯಲ್ಲಿ ಬುಧವಾರ ಪ್ರತಿಭಟಿಸಿದರು.ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಗುತ್ತಿಗೆ ನೌಕರರು, ಚನ್ನಮ್ಮ ವೃತ್ತದ ಮೂಲಕ ಜಿಲ್ಲಾಧಿ ಕಾರಿಗಳ ಕಚೇರಿಯನ್ನು ತಲುಪಿಸಿದರು.ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಕರ್ನಾ ಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿಯಲ್ಲಿ ಕಾರ್ಯನಿರ್ವ ಹಿಸುತ್ತಿರುವ ಗುತ್ತಿಗೆ ನೌಕರರಿಗೂ 6ನೇ ವೇತನ ಶ್ರೇಣಿಯಂತೆ ವೇತನವನ್ನು ನೀಡಬೇಕು. ಪ್ರತಿ ತಿಂಗಳು ವೇತನ ರಸೀದಿ ನೀಡಬೇಕು.ಮಹಿಳಾ ನೌಕರ ರಿಗೆ 180 ದಿನಗಳ ಪೂರ್ಣ ವೇತನ ಸಹಿತ ಹೆರಿಗೆ ರಜೆಯನ್ನು ನೀಡಬೇಕು. ಈಗಿನ ಹುದ್ದೆಯನ್ನು ಸರ್ಕಾರಿ ಹುದ್ದೆಗಳೊಂದಿಗೆ ವಿಲೀನಗೊಳಿಸಬೇಕು~ ಎಂದು ಪತ್ರಿಭಟನಾಕರರು ಒತ್ತಾಯಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.