ಮಂಗಳವಾರ, ಮೇ 11, 2021
27 °C

ವೇತನ ಹೆಚ್ಚಳ: ಅಧಿಸೂಚನೆ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಧಿಕಾರಿಗಳ ವೇತನ ಸಮಿತಿ ವರದಿಯ ಶಿಫಾರಸಿನ ಪ್ರಕಾರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ   ಅಧಿಸೂಚನೆ ಹೊರಡಿಸಿದೆ.

 ವೇತನ ಪರಿಷ್ಕರಣೆ ಹಿನ್ನೆಲೆಯಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮಗಳಿಗೆ ತಿದ್ದುಪಡಿಗಳೊಂದಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.ಮೂಲವೇತನ, ಭತ್ಯೆಗಳ ನಿಗದಿ, ಬಡ್ತಿ ಮತ್ತಿತರ ವಿಷಯಗಳಿಗೆ ಸಂಬಂಧಿಸಿದ ಪೂರ್ಣ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ. ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳ ವೇತನ ಸಮಿತಿ ನೀಡಿದ್ದ ವರದಿಯ ಬಹುತೇಕ ಶಿಫಾರಸುಗಳು ಅಧಿಸೂಚನೆಯಲ್ಲಿವೆ. ವೇತನ ಪರಿಷ್ಕರಣೆ ಅನುಷ್ಠಾನ ಕುರಿತ ವಿವರಗಳೂ ಆದೇಶದಲ್ಲಿವೆ.25 ಸಾವಿರ ಮತ್ತು ಅದಕ್ಕಿಂತ ಕಡಿಮೆ ಜನಸಂಖ್ಯೆ ಇರುವ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವ ಸರ್ಕಾರಿ ನೌಕರರಿಗೆ ನೀಡುತ್ತಿದ್ದ ಗ್ರಾಮೀಣ ಭತ್ಯೆ  ಕಡಿತ ಮಾಡಲಾಗಿದೆ. ಈವರೆಗೂ 100 ರೂಪಾಯಿ ಗ್ರಾಮೀಣ ಭತ್ಯೆ ನೀಡಲಾಗುತ್ತಿತ್ತು. ಪರಿಷ್ಕೃತ ವೇತನ ಶ್ರೇಣಿ ಜಾರಿಗೆ ಬಂದ ಹಿನ್ನೆಲೆಯಲ್ಲಿ ಈ ಭತ್ಯೆ ಕಡಿತ ಮಾಡಲಾಗಿದೆ.ಹೆರಿಗೆ ರಜೆಯ ಅವಧಿ ಹೆಚ್ಚಳ ಸೇರಿದಂತೆ ಕೆಲ ವಿಷಯಗಳ ಬಗ್ಗೆ ಆದೇಶದಲ್ಲಿ ಪ್ರಸ್ತಾಪಿಸಿಲ್ಲ. ಬಾಕಿ ಉಳಿದಿರುವ ಎಲ್ಲ ವಿಚಾರಗಳ ಕುರಿತು ಪ್ರತ್ಯೇಕ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.