ವೈಜ್ಞಾನಿಕತೆ ಬೆಳೆಸಿಕೊಳ್ಳಲು ಕರೆ

7

ವೈಜ್ಞಾನಿಕತೆ ಬೆಳೆಸಿಕೊಳ್ಳಲು ಕರೆ

Published:
Updated:

ಗುಲ್ಬರ್ಗ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಮೂಲಕ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಎಸ್.ಜಿ. ವಾಲಿ ತಿಳಿಸಿದರು.ನಗರದ ನೂತನ ವಿದ್ಯಾಲಯ ಸಂಸ್ಥೆಯ ಕನ್ಯಾ ಪ್ರೌಢಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ವಿಜ್ಞಾನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಮಲಾಪುರ ಸಿಟಿಇ ಪ್ರಾಚಾರ್ಯ ಸೈಯದ್ ಖಲಿಂದರ್ ಮಾತನಾಡಿ, ಪ್ರತಿಯೊಬ್ಬರು ವಿಜ್ಞಾನದ ಮಹತ್ವ ಅರಿತುಕೊಳ್ಳಬೇಕು ಎಂದು ಕರೆ ನೀಡಿದರು. ನೂತನ ವಿದ್ಯಾಲಯ ಸಂಸ್ಥೆಯ ಅಧ್ಯಕ್ಷ ಡಾ. ಮುರಳೀಧರ ಎಸ್. ರಾವ ಅಧ್ಯಕ್ಷತೆ ವಹಿಸಿದ್ದರು.

ಸಂಸ್ಥೆಯ ಕಾರ್ಯದರ್ಶಿ ಶಾಮರಾವ ಖಣಗೆ, ಜೋಗ-ಶೇಟಿ ವಿಜ್ಞಾನ ಕೇಂದ್ರದ ಉಪಾಧ್ಯಕ್ಷ ಡಾ. ಗೌತಮ ಜಹಾಗಿರದಾರ, ಸಂಚಾಲಕ ರಫೀಕ್, ಪ್ರಕಾಶ ಕುಲಕರ್ಣಿ, ಜಿ.ಎಂ. ಪೂಜಾರಿ ಮತ್ತಿತರರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry