ಭಾನುವಾರ, ಮೇ 22, 2022
24 °C

ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರಟಗಿ: ಮೂಲ ವಿಜ್ಞಾನದಿಂದ ಮೂಢನಂಬಿಕೆಗಳನ್ನು ಹೋಗಲಾಡಿಸುವ ಕಾರ್ಯಕ್ರಮಗಳು ಹೆಚ್ಚು, ಹೆಚ್ಚಾಗಿ ನಡೆದಾಗಲೆ ವಿದ್ಯಾರ್ಥಿಗಳು ವೈಜ್ಞಾನಿಕತೆಯತ್ತ ಸಹಜವಾಗಿ ವಾಲುವರು ಎಂದು ಸಿ. ಮಲ್ಲಿಕಾರ್ಜುನ ನಾಗಪ್ಪ ಮಹಾವಿದ್ಯಾಲಯದ ಶಿಕ್ಷಕ ವಿಜಯ ವೈದ್ಯ ಹೇಳಿದರು.ಬುಧವಾರ ಇಲ್ಲಿಯ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸಾಲುಮರದ ತಿಮ್ಮಕ್ಕ ಇಕೋ ಕ್ಲಬ್, ವಿಜ್ಞಾನ ಸಂಘದ ಆಶ್ರಯದಲ್ಲಿ ನಡೆದ `ವಿದ್ಯಾರ್ಥಿಗಳು ಮೂಲ ವಿಜ್ಞಾನದೆಡೆಗೆ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಶಿಕ್ಷಕ ಗುರುಬಸಪ್ಪ ಪಟ್ಟಣಶೆಟ್ಟಿ ಮೂಢನಂಬಿಕೆ, ಜಾದು ಮೊದಲಾದ ಕಣ್ಕಟ್ಟುಗಳ ಬಗೆಗೆ ವಿವರಿಸಿ, ಪ್ರಾತ್ಯಕ್ಷಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಕೌತುಕ ಮೂಡಿಸಿದರು.ಬಳಿಕ ಮಾತನಾಡಿದ ಅವರು, ಅನೇಕ ಪ್ರಯೋಗಗಳ ಮೂಲಕ ವಿದ್ಯಾರ್ಥಿಗಳಲ್ಲಿನ ಸಂಶಯಗಳನ್ನು ಹೋಗಲಾಡಿಸಿ, ವೈಜ್ಞಾನಿಕ ಮನೋಭಾವ ಮೂಡಿಸಬಹುದಾಗಿದೆ. ಇಂಥ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಪ್ರಾಥಮಿಕ, ಉಳಿದ ಪ್ರೌಢಶಾಲೆಗಳಲ್ಲಿ ಏರ್ಪಡಿಸಿ, ಕಬ್ಬಿಣದ ಕಡಲೆಯಾಗಿರುವ ವಿಜ್ಞಾನ ವಿಷಯವನ್ನು ಸರಳ ಆಗುವಂತೆ ಮಾಡಲಾಗುವುದು ಎಂದರು.ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ನಿರ್ದೇಶಕ ಅಮರೇಶ್ ಮೈಲಾಪೂರ ಏನು? ಏಕೆ? ಹೇಗೆ? ಎಂದು ಪ್ರಶ್ನಿಸುವತ್ತ ವಿದ್ಯಾರ್ಥಿಗಳು ಮುಂದಾದರೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ದೊರೆಯುವುದು. ಇದು ವೈಜ್ಞಾನಿಕ ಮನೋಭಾವ ಬೆಳೆಯುವುದಕ್ಕೆ ಸಹಕಾರಿಯಾಗುವುದು ಎಂದರು.ಪ್ರಭಾರ ಉಪ ಪ್ರಾಚಾರ್ಯ ಲಕ್ಷಣ ಹುಲಿಗಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ವಿಜಯಕುಮಾರ ಕಟಾಂಬ್ಲಿ, ಮಹೇಶ್ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕಿ ದಾಕ್ಷಾಯಿಣಿ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.