ಸೋಮವಾರ, ಮೇ 23, 2022
30 °C

ವೈದ್ಯಕೀಯ ಶಿಕ್ಷಣ - ರಾಷ್ಟ್ರಾದ್ಯಂತ ಸಮಾನ ಪ್ರವೇಶ ಪರೀಕ್ಷೆ: ಸುಪ್ರೀಂ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ):  ಎಂಬಿಬಿಎಸ್ ಮತ್ತು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ ಈ ಶೈಕ್ಷಣಿಕ ವರ್ಷದಿಂದ ದೇಶದಾದ್ಯಂತ ಸಮಾನ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ ನಡೆಸುವಂತೆ ಸುಪ್ರೀಂಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು.



ನ್ಯಾಯಮೂರ್ತಿಗಳಾದ ಆರ್.ವಿ. ರವೀಂದ್ರನ್ ಮತ್ತು ಎ.ಕೆ. ಪಟ್ನಾಯಿಕ್ ಅವರನ್ನು ಒಳಗೊಂಡ ಪೀಠವು ಈ ನಿಟ್ಟಿನಲ್ಲಿ ಆದೇಶ ಹೊರಡಿಸಿ ~ಇದು ರಾಷ್ಟ್ರದಲ್ಲಿನ ಖಾಸಗಿ ವೈದ್ಯಕೀಯ ಕಾಲೇಜುಗಳಿಗೂ ಅನ್ವಯಿಸುವುದು~ ಎಂದು ಹೇಳಿತು.



ಭಾರತೀಯ ವೈದ್ಯಕೀಯ ಮಂಡಳಿಯು ಎಂಬಿಬಿಎಸ್ ಮತ್ತು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ ರಾಷ್ಟ್ರದಾದ್ಯಂತ ಸಮಾನ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನಡೆಸುವಂತೆ ಮಾಡಿದ್ದ ಮನವಿಯನ್ನು ಪುರಸ್ಕರಿಸಿದ ಪೀಠವು ಅದರಂತೆ ಏಕೈಕ ಸಾಮಾನ್ಯ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ಸೂಚಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.