ಮಂಗಳವಾರ, ಜನವರಿ 21, 2020
28 °C

ವೈದ್ಯಕೀಯ ಸೀಟು: ಮೇಲ್ವಿಚಾರಣಾ ಸಮಿತಿ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೈದ್ಯಕೀಯ/ದಂತವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆ ಮತ್ತು ಶುಲ್ಕನಿಗದಿ ಸಂಬಂಧ ಈ ಸಾಲಿನಲ್ಲಿ ಸರ್ಕಾರ, ಕಾಮೆಡ್-ಕೆ ಮತ್ತು ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸಂಘದ ನಡುವೆ ಆಗಿರುವ ಒಪ್ಪಂದವನ್ನು ಅನುಷ್ಠಾನಗೊಳಿಸಲು ಉಸ್ತುವಾರಿಗಾಗಿ ಏಕಸದಸ್ಯ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ.ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಚ್.ಪಿ.ಖಿಂಚ ನೇತೃತ್ವದಲ್ಲಿ ಏಕಸದಸ್ಯ ಮೇಲ್ವಿಚಾರಣಾ ಸಮಿತಿಯನ್ನು ರಚಿಸಿ ಗುರುವಾರ ಆದೇಶ ಹೊರಡಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ತಿಳಿಸಿದ್ದಾರೆ.ಹಿಂದೆ ಡಾ.ಕೆ.ಸುಧಾರಾವ್ ಅವರ ನೇತೃತ್ವದಲ್ಲಿ ಏಕಸದಸ್ಯ ಮೇಲುಸ್ತುವಾರಿ ಸಮಿತಿಯನ್ನು ರಚಿಸಲಾಗಿತ್ತು. ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಖಿಂಚ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)