ಭಾನುವಾರ, ಮೇ 22, 2022
24 °C

ವೈದ್ಯನಾಥನ್ ವರದಿ ಜಾರಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಶಾಲಾ- ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ನೀಡುವ ಕುರಿತಂತೆ ಪ್ರೊ.ಎಲ್.ಆರ್. ವೈದ್ಯನಾಥನ್ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ಅನುಷ್ಠಾನಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಸದಸ್ಯರು ಒತ್ತಾಯಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರಿಗೆ ಬರೆದ ಮನವಿ ಪತ್ರವನ್ನು ಸಂಘದ ಸದಸ್ಯರನ್ನು ಒಳಗೊಂಡ ನಿಯೋಗ ಶುಕ್ರವಾರ ಇಲ್ಲಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರಿಗೆ ಸಲ್ಲಿಸಿತು.

ಸಂಘದ ಜಿಲ್ಲಾ ಅಧ್ಯಕ್ಷ ಮೊಹ್ಮದ್ ಅಬ್ದುಲ್ ಕರೀಂ ವಂಟೇಳಿ ಮಾತನಾಡಿ, ಪ್ರೊ.ಎಲ್.ಆರ್. ವೈದ್ಯನಾಥನ್ ನೀಡಿರುವ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿದ್ದರೂ ಸಾರ್ವಜನಿಕ ಶಿಕ್ಷಣ ಇಲಾಖೆ ಅನುಷ್ಠಾನಗೊಳಿಸಲು ವಿಳಂಬ ಮಾಡುತ್ತಿದೆ ಎಂದರು. ದೈಹಿಕ ಶಿಕ್ಷಣದ ಅಗತ್ಯದ ಹಿನ್ನೆಲೆಯಲ್ಲಿ ಕೂಡಲೇ ಈ ವರದಿಯ ಶಿಫಾರಸುಗಳನ್ನು ಜಾರಿಗೆ ತರುವಂತೆ ಮನವಿ ಮಾಡಿದರು.ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸೂಕ್ತ ತಿದ್ದುಪಡಿ ತರಬೇಕು. ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರನ್ನು ಕೂಡಲೇ ನೇಮಕ ಮಾಡಿಕೊಳ್ಳಬೇಕು ಎಂದೂ ಮನವಿ ಮಾಡಿದರು.ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದೂ ಪ್ರತಿಭಟನಾಕಾರರು ದೂರಿದರು.ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಕುಮಾರ ಕಂಬಳಿ, ಕೋಶಾಧ್ಯಕ್ಷ ಚಂದಾಲಿಂಗಪ್ಪ ಎಂ.ಹಳ್ಳೂರು ಮತ್ತಿತರರು ನಿಯೋಗದಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.