ಶನಿವಾರ, ಮೇ 21, 2022
26 °C

ವೈದ್ಯನಾಥ ಸಮಿತಿ: ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಲವು ಮಾಧ್ಯಮ ಪ್ರತಿನಿಧಿಗಳು ಹಾಗೂ ವಕೀಲರ ನಡುವೆ ನಗರ ಸಿವಿಲ್ ನ್ಯಾಯಾಲಯಗಳ ಸಂಕೀರ್ಣದ ಆವರಣದಲ್ಲಿ ಮಾರ್ಚ್ 2ರಂದು ಸಂಭವಿಸಿದ ಅಹಿತಕರ ಘಟನೆಗಳ ಕುರಿತು ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಆರ್.ಜಿ. ವೈದ್ಯನಾಥ ಸಮಿತಿಯ ಎದುರು ಪ್ರಮಾಣ ಪತ್ರಗಳನ್ನು ಸಲ್ಲಿಸಲು ಇದೇ 30ರವರೆಗೆ ಅವಕಾಶ ಕಲ್ಪಿಸಲಾಗಿದೆ.ಆಯೋಗದ ಎದುರು ಇದೇ 8ರೊಳಗೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಈ ಮೊದಲು ಸೂಚಿಸಲಾಗಿತ್ತು. ಆದರೆ ಪ್ರಮಾಣಪತ್ರ ಸಲ್ಲಿಸಲು ಅಗತ್ಯವಿರುವ ಮಾಹಿತಿ ಸಂಗ್ರಹಣಾ ಕಾರ್ಯ ಇನ್ನೂ ಪ್ರಗತಿಯಲ್ಲಿದೆ ಎಂಬ ಕಾರಣ ನೀಡಿ, ಅವಧಿ ವಿಸ್ತರಿಸಲು ಪೊಲೀಸ್ ಇಲಾಖೆ ಮನವಿ ಮಾಡಿತ್ತು ಎಂದು ಆಯೋಗದ ಕಾರ್ಯದರ್ಶಿ ಎಂ.ಜೆ. ಇಂದ್ರಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಪರವಾಗಿ ವಾದ ಮಂಡಿಸಲು ಸರ್ಕಾರ ಇನ್ನೂ ವಕೀಲರನ್ನು ನೇಮಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಮಾಣಪತ್ರ ಸಲ್ಲಿಸಲು 30ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕೊನೆಯ ದಿನ ಸಂಜೆ ನಾಲ್ಕು ಗಂಟೆಗೂ ಮುನ್ನ ಸಂಬಂಧಪಟ್ಟವರು ಪ್ರಮಾಣಪತ್ರ ಸಲ್ಲಿಸಬೇಕು ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.