ಭಾನುವಾರ, ಜೂನ್ 20, 2021
20 °C

ವೈದ್ಯರಿಗೆ ಕರೆ ಮಾಡಿದ ಅಂಬರೀಷ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಸಿಂಗಪುರದ ಮೌಂಟ್‌ ಎಲಿಜಬೆತ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ, ವಸತಿ ಸಚಿವ ಅಂಬರೀಷ್ ಅವರ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಂಡುಬಂದಿದ್ದು, ವಿಕ್ರಂ ಆಸ್ಪತ್ರೆಯ ವೈದ್ಯರೊಂದಿಗೆ ಅಂಬರೀಷ್‌ ಅವರೇ  ದೂರವಾಣಿಯ ಮೂಲಕ ಮಾತನಾಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.ಈ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯ ಡಾ.ಕೆ.ಎಸ್‌.ಸತೀಶ್‌, ‘ ಅಂಬರೀಷ್‌ ಅವರ ಶ್ವಾಸಕೋಶದ ಸೋಂಕು ಗಣನೀಯವಾಗಿ ಕಡಿಮೆಯಾಗಿದ್ದು, ಅವರು ಸಹಜ ಸ್ಥಿತಿಗೆ ಮರಳಿದ್ದಾರೆ. ಅಲ್ಲದೇ ನನ್ನೊಂದಿಗೆ ಶುಕ್ರವಾರ ಬೆಳಿಗ್ಗೆ ಅವರೇ ಪೋನಿನಲ್ಲಿ ಮಾತನಾಡಿದರು’ ಎಂದು ಹೇಳಿದರು.‘ವಿಶೇಷ ವಾರ್ಡ್‌ನಲ್ಲಿಯೇ ವಿಶ್ರಾಂತಿ ಪಡೆಯುತ್ತಿರುವ ಅವರು ವಾರ್ಡ್‌ನ ಆವರಣದಲ್ಲಿ ವಾಕಿಂಗ್‌ ಮಾಡುವಷ್ಟು ಸಶಕ್ತರಾಗಿದ್ದಾರೆ. 15 ದಿನದ ಒಳಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿ, ಮನೆಗೆ ಮರಳುವ ಸಾಧ್ಯತೆಯಿದೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.