`ವೈದ್ಯರ ಗ್ರಾಮೀಣ ಸೇವೆ: ಮಸೂದೆ ರಾಷ್ಟ್ರಪತಿ ಅಂಕಿತಕ್ಕೆ

7

`ವೈದ್ಯರ ಗ್ರಾಮೀಣ ಸೇವೆ: ಮಸೂದೆ ರಾಷ್ಟ್ರಪತಿ ಅಂಕಿತಕ್ಕೆ

Published:
Updated:

 


ಕಾರವಾರ: `ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯಗೊಳಿಸುವ ವಿಧೇಯಕವನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿದೆ' ಎಂದು ಆರೋಗ್ಯ ಸಚಿವ ಅರವಿಂದ ಲಿಂಬಾವಳಿ ಗುರವಾರ ಇಲ್ಲಿ ಹೇಳಿದರು.

 

ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿ, `ಎಂ.ಬಿ.ಬಿ.ಎಸ್ ಕೋರ್ಸ್ ಪೂರ್ಣಗೊಳಿಸಿದ ಒಂದು ತಂಡ ಜನವರಿಯಲ್ಲಿ ಹೊರಗೆ ಬರಲಿದ್ದು, ತಕ್ಕಮಟ್ಟಿಗೆ ವೈದ್ಯರ ಕೊರತೆ ನೀಗಲಿದೆ' ಎಂದರು.

 

`ಆರೋಗ್ಯ ಇಲಾಖೆಯು ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಈಗಾಗಲೇ ಬೆಳಗಾವಿಯಲ್ಲಿ ಒಂದು ಸುತ್ತಿನ ಮಾತುಕತೆ ನಡೆಸಿ ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲಾಗಿದೆ. ಉಳಿದ ಬೇಡಿಕೆಗಳನ್ನು ಪರಿಶೀಲಿಸಲು ಮುಖ್ಯಮಂತ್ರಿಗಳು ನನ್ನ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಿದ್ದಾರೆ. ಈ ಸಮಿತಿಯಲ್ಲಿ ಉಪ ಮುಖ್ಯಮಂತ್ರಿ  ಅಶೋಕ, ಸಚಿವರಾದ ಸುರೇಶ ಕುಮಾರ ಮತ್ತು ಎಸ್.ಎ.ರಾಮದಾಸ್ ಇದ್ದಾರೆ' ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry