ಶುಕ್ರವಾರ, ಏಪ್ರಿಲ್ 16, 2021
31 °C

ವೈದ್ಯರ ಹಳ್ಳಿ ಸೇವೆಗೆ ಸುಗ್ರೀವಾಜ್ಞೆ: ಸಚಿವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸ್ನಾತಕ ಮತ್ತು ಸ್ನಾತಕೋತ್ತರ ವೈದ್ಯಕಿಯ ಪದವೀಧರರು ಗ್ರಾಮೀಣ ಪ್ರದೇಶಗಳಲ್ಲಿ ಒಂದು ವರ್ಷ ಸೇವೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಿ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಕರ್ನಾಟಕದ ವೈದ್ಯಕೀಯ ಶಿಕ್ಷಣ ಸಚಿವ ಎ. ರಾಮ್‌ದಾಸ್ ತಿಳಿಸಿದ್ದಾರೆ.ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಪದವಿ ಮುಗಿಸುವ ವೈದ್ಯರು, ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ತುರ್ತು ಆದೇಶದಲ್ಲಿ ಅವಕಾಶವಿರುತ್ತದೆ ಎಂದರು.ಸ್ವಾಯತ್ತ ವಿಶ್ವವಿದ್ಯಾಲಯದ ವೈದ್ಯಕೀಯ ಪದವಿಧರರಿಗೆ ಈ ಆದೇಶ ಈ ವರ್ಷ ಅನ್ವಯವಾಗುವುದಿಲ್ಲ. ಆದರೆ ಮುಂದಿನ ವರ್ಷದಿಂದ ಅವರೂ ಈ ಆದೇಶವನ್ನು ಪಾಲಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಈಗ 1800 ವೈದ್ಯರ ಕೊರತೆ ಇದೆ ಎಂದು ಸಚಿವರು ತಿಳಿಸಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.