ಭಾನುವಾರ, ಆಗಸ್ಟ್ 1, 2021
28 °C

ವೈದ್ಯಾಧಿಕಾರಿ ವರ್ಗಾವಣೆೆ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ಗುಂಡ್ಲುಪೇಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಶ್ರೀನಿವಾಸ್ ಅವರ ವರ್ಗಾವಣೆಯನ್ನು ರದ್ದುಗೊಳಿಸ ಬೇಕೆಂದು ಆಗ್ರಹಿಸಿ ಕನ್ನಡ ರಕ್ಷಣಾ ವೇದಿಕೆಯ ಸದಸ್ಯರು ಸೋಮವಾರ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಅಧ್ಯಕ್ಷ ಬಿ.ಎಂ.ಸುರೇಶ್, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದ್ದರೂ ಸಹ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಾಧಿಕಾರಿ ಡಾ. ಶ್ರೀನಿವಾಸ್ ಅವರನ್ನು ವರ್ಗಾಯಿಸಿರುವುದು ಸರಿಯಲ್ಲ ಎಂದರು.ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 680 ಜನ ವೈದ್ಯಾಧಿಕಾರಿಗಳನ್ನು ಯಾವುದೇ ಕೌನ್ಸೆಲಿಂಗ್ ಮಾಡದೆ ವರ್ಗಾವಣೆ ಮಾಡಿರುವುದು ಅವೈಜ್ಞಾನಿಕವಾಗಿದೆ, ಪ್ರಸ್ತುತ ಸನ್ನಿವೇಶದಲ್ಲಿ ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ಶ್ರೀನಿವಾಸ್ ಅವರ ವರ್ಗಾವಣೆ ಸರಿಯಲ್ಲ. ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳು ಇತ್ತ ಗಮನಹರಿಸಿ ಇವರ ವರ್ಗಾವಣೆಯನ್ನು ರದ್ದು ಪಡಿಸಬೇಕು ಅಥವಾ ಬದಲಿ ವೈದ್ಯಾಧಿಕಾರಿಯ ನೇಮಕ ಮಾಡಿದ ನಂತರ ಇವರನ್ನು ವರ್ಗಾಯಿಸ ಬೇಕೆಂದು ಆಗ್ರಹಿಸಿದರು.ಉಪಾಧ್ಯಕ್ಷ ಎನ್. ಕುಮಾರ್, ಪುರಸಭಾ ಸದಸ್ಯ ಲೋಕೇಶ್, ನವೀದ್, ಆಟೋ ರಾಜೇಂದ್ರ, ಕೆಂಡಗಣ್ಣಸ್ವಾಮಿ, ಹೊಸೂರು ನಾಗರಾಜ್, ಮಹಿಳಾ ಅಧ್ಯಕ್ಷೆ ಮಂಗಳಮ್ಮ, ಶಾರದಾ ಹಾಗೂ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ತಹಶೀಲ್ದಾರ್ ಕಚೇರಿಯ ಮುಂಭಾಗದಲ್ಲಿ ಸಮಾವೇಶಗೊಂಡು ತಹಶೀಲ್ದಾರ್ ಜಿ.ಎನ್. ಮಂಜುನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.