ವೈದ್ಯ ಕಾಲೇಜುಗಳಲ್ಲಿ ಡಿಪ್ಲೊಮಾ ಕೋರ್ಸ್

ಗುರುವಾರ , ಜೂಲೈ 18, 2019
22 °C

ವೈದ್ಯ ಕಾಲೇಜುಗಳಲ್ಲಿ ಡಿಪ್ಲೊಮಾ ಕೋರ್ಸ್

Published:
Updated:

ಮೈಸೂರು: `ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗಾಗಿ ವೈದ್ಯಕೀಯ ಶಿಕ್ಷಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಿಂದಲೇ ಡಿಪ್ಲೊಮಾ ಕೋರ್ಸ್‌ಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ~ ಎಂದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಶನಿವಾರ ಇಲ್ಲಿ ತಿಸಿದರು.`ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮೂರು ವರ್ಷ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷದ ಡಿಪ್ಲೊಮಾ ಕೋರ್ಸ್ ಆರಂಭಿಸಲಾಗುವುದು. ಇಲಾಖೆ ವ್ಯಾಪ್ತಿಯ 18 ವೈದ್ಯಕೀಯ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ಯಾರಾ ಮೆಡಿಕಲ್ ಕೋರ್ಸ್‌ಗಳನ್ನು ಆರಂಭಿಸಲಾಗುವುದು~ ಎಂದರು.

 ಹೇಳಿದರು.`ಹೆಚ್ಚು ಅಂಕ ಪಡೆದವರು ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇತರೆ ಕೋರ್ಸ್‌ಗಳಿಗೆ ಪ್ರವೇಶ ಪಡೆದು ಕೊಳ್ಳುತ್ತಾರೆ. ಆದರೆ, ಕಡಿಮೆ ಅಂಕ ಗಳಿಸಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಚಿಂತನೆ ಮಾಡಲಾಗಿದೆ.ಕೋರ್ಸ್‌ನ ಅವಧಿಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ ಪ್ರೋತ್ಸಾಹಧನ ನೀಡಲಾಗುವುದು. ಜೊತೆಗೆ ಇಂಗ್ಲಿಷ್‌ನಲ್ಲಿ ಪ್ರೌಢಿಮೆ ಸಾಧಿಸಲು ವಿಶೇಷ ತರಬೇತಿಯನ್ನೂ ನೀಡಲಾಗುವುದು~ ಎಂದರು.`ರೇಡಿಯೋ ಡೈಗ್ನೋಸಿಸ್, ನರ್ಸಿಂಗ್, ಲ್ಯಾಬ್ ಟೆಕ್ನಿಷಿಯನ್, ಫಿಸಿಯೋಥೆರಪಿ, ಎಕ್ಸರೇ ಟೆಕ್ನಿಷಿಯನ್ ಸೇರಿದಂತೆ ವಿವಿಧ ಕೋರ್ಸ್‌ಗಳನ್ನು ಪ್ರಾರಂಭಿಸಲಾಗುವುದು. ಪ್ಯಾರಾ ಮೆಡಿಕಲ್ ಕೋರ್ಸ್ ಮುಗಿಸಿರುವ ಭಾರತೀಯ ವಿದ್ಯಾರ್ಥಿಗಳಿಗೆ ವಿದೇಶಗಳಲ್ಲಿ ಅಪಾರ ಬೇಡಿಕೆ ಇದ್ದು, ಸಾಕಷ್ಟು ಉದ್ಯೋಗಾವಕಾಶಗಳು ಲಭ್ಯ ಇವೆ. ಈ ಹಿನ್ನೆಲೆಯಲ್ಲಿ ಡಿಪ್ಲೊಮಾ ಕೋರ್ಸ್ ಆರಂಭಿಸಲಾಗುತ್ತಿದೆ~ ಎಂದು ತಿಳಿಸಿದರು.

--------

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry