ಸೋಮವಾರ, ಮೇ 23, 2022
21 °C

ವೈದ್ಯ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಪ್ರತಿಭಾವಂತ ಬಡ ವೈದ್ಯ ವಿದ್ಯಾರ್ಥಿಗಳಿಗೆ ಗುಲ್ಬರ್ಗದ ಡಾ. ಪಿ.ಎಸ್. ಶಂಕರ ಪ್ರತಿಷ್ಠಾನ ನೀಡುವ ನಾಲ್ಕು ವಿದ್ಯಾರ್ಥಿವೇತನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಲೋಪಥಿಕ್ ವೈದ್ಯ ವಿಜ್ಞಾನದ ಮೊದಲ ಎಂ.ಬಿ.ಬಿ.ಎಸ್. ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ಅರ್ಹರು ಅ. 15ರೊಳಗೆ ಅರ್ಜಿ ಸಲ್ಲಿಸಬಹುದು.ಎಂ.ಬಿ.ಬಿ.ಎಸ್. ಶಿಕ್ಷಣದ ನಾಲ್ಕೂವರೆ ವರ್ಷಗಳವರೆಗೆ (54 ತಿಂಗಳು) ಪ್ರತಿ ತಿಂಗಳು ಒಂದು ಸಾವಿರ ರೂಪಾಯಿಗಳಂತೆ ಆಯ್ಕೆಯಾದ ನಾಲ್ಕು ವಿದ್ಯಾರ್ಥಿಗಳಿಗೆ ಕೊಡಲಾಗುವುದು. ಗ್ರಾಮೀಣ ಪ್ರದೇಶದ ಹಾಗೂ ಕನ್ನಡ ಮಾಧ್ಯಮದಲ್ಲಿ ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಪ್ರಾಶಸ್ತ್ಯವಿದೆ.ಅರ್ಹರು ಅರ್ಜಿಯನ್ನು ಆಯಾ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯರ ಮೂಲಕ ಅಥವಾ ನೇರವಾಗಿ ಎಂ.ಸದಾನಂದ, ಸಹ ಕಾರ್ಯದರ್ಶಿ, ಡಾ. ಪಿ.ಎಸ್.ಶಂಕರ ಪ್ರತಿಷ್ಠಾನ, `ಗುರಪ್ಪ ನಿಲಯ~, ಸ್ವಸ್ತಿಕ್ ನಗರ, ಸೇಡಂ ರಸ್ತೆ, ಗುಲ್ಬರ್ಗ-585105 (ಮೊ: 9341027550) ಇಲ್ಲಿಗೆ ಸಲ್ಲಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.