ಕಾರವಾರ: ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಡುವಿರುವ ವೈಮನಸ್ಸು ಶಮನ ಮಾಡಲು ಇದೇ 14ರಂದು ಪಿಡಿಓ ಮತ್ತು ಗ್ರಾ.ಪಂ. ಅಧ್ಯಕ್ಷರ ಸೌಹಾರ್ದ ಸಭೆ ಕರೆಯಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿರಾಜ್ ಸಚಿವ ಜಗದೀಶ ಶೆಟ್ಟರ ಹೇಳಿದರು.

ನಗರದ ಎಂ.ಜಿ.ರಸ್ತೆಯಲ್ಲಿ ನಿರ್ಮಾಣವಾಗಿರುವ ಜಿಲ್ಲಾ ಪಂಚಾಯಿತಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸಭೆ ನಡೆಯಲಿದ್ದು ಪ್ರತಿ ತಾಲ್ಲೂಕಿನಿಂದ ನಾಲ್ಕು ಪಿಡಿಒಗಳನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದರು.

ಪಿಡಿಒ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರ ನಡುವಿನ ವೈಮನಸ್ಸಿನಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಪರಸ್ಪರರಲ್ಲಿ ಯಾವರೀತಿಯ ಹೊಂದಾಣಿಕೆ ಇರಬೇಕು, ಸಮಾಜಕ್ಕೆ ಅವರ ಕೊಡುಗೆ ಏನು ಎನ್ನುವುದನ್ನು ಮನದಟ್ಟು ಮಾಡಿಕೊಟ್ಟು ಒಂದಾಗಿ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ಮನವರಿಕೆ ಮಾಡಲಾಗುವುದು ಎಂದರು.

ವಿಕೇಂದ್ರೀಕರಣ ವ್ಯವಸ್ಥೆಯನ್ನು ಬಲಪಡಿಸಿ ಅಭಿವೃದ್ಧಿಗೆ ಹೊಸರೂಪ ನೀಡಲು ವೃಂದ ಮತ್ತು ನೇಮಕಾತಿ ಕಾನೂನಿಗೆ ತಿದ್ದುಪಡಿ ತಂದು ಕಾರ್ಯನಿರ್ವಾಹಕ ಅಧಿಕಾರಿಗಳನ್ನು ನೇರವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. 1400 ಪಿಡಿಒ ಮತ್ತು 600ರಿಂದ 700 ಸಹಾಯಕ ಎಂಜಿನಿಯರ್ಗಳನ್ನೂ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.