ವೈಮಾನಿಕ ದಾಳಿ: 38 ಉಗ್ರರ ಸಾವು

7

ವೈಮಾನಿಕ ದಾಳಿ: 38 ಉಗ್ರರ ಸಾವು

Published:
Updated:

ಇಸ್ಲಾಮಾಬಾದ್ (ಪಿಟಿಐ): ಭದ್ರತಾ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಪಾಕಿಸ್ತಾನ ತಾಲಿಬಾನ್ ಉಗ್ರ ಸಂಘಟನೆಯ ಹಿರಿಯ ಮುಖಂಡ ಸೇರಿದಂತೆ 38 ಉಗ್ರರು ಸಾವನ್ನಪ್ಪಿರುವ ಘಟನೆ ಹಿಂಸಾಪೀಡಿತ ವಾಯವ್ಯ ಪಾಕಿಸ್ತಾನದಲ್ಲಿ ಬುಧವಾರ ನಡೆದಿದೆ.ಕಳೆದ ಕೆಲವು ತಿಂಗಳಿನಿಂದ ಈ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಿರಂತರ ಸಂಘರ್ಷ ನಡೆಯುತ್ತಿದ್ದು, ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ವೈಮಾನಿಕ ದಾಳಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry